ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಚುನಾವಣೆ (Election) ಮುಂದೂಡಿಕೆ ಆಗುವುದು ಖಚಿತವಾಗಿದ್ದು, ಹೊಸದಾಗಿ ವಾರ್ಡ್ ಪುನರ್ ವಿಂಗಡಣೆ(Ward redistribution) ಗೆ ಹೈಕೋರ್ಟ್ 12 ವಾರಗಳ ಕಾಲಾವಕಾಶ ನೀಡಿದೆ.
ಹೈಕೋರ್ಟ್ ಏಕಸದಸ್ಯ ಪೀಠ ವಾರ್ಡ್ ಪುನರ್ ವಿಂಗಡಣೆ ಪ್ರಶ್ನೆಸಿ ಮಾಜಿ ಮೇಯರ್ ಬಿ.ಎನ್. ಮಂಜುಣಾಥ್ ರೆಡ್ಡಿ ಅವರು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಬಿಬಿಎಂಪಿ ಹೊಸದಾಗಿ ವಾರ್ಡ್ ಪುನರ್ ವಿಂಗಡಣೆಗೆ 12 ವಾರಗಳ ಕಾಲಾವಕಾಶ ನೀಡಿದೆ.
ಹೈಕೋರ್ಟ್ ನಲ್ಲಿ ಇಂದು ಸರ್ಕಾರದ ಪರ ವಾದ ಮಂಡಿಸಿದ ಶಶಿಕಿರಣ್ ಶೆಟ್ಟಿ ಅವರು, ಹೊಸದಾಗಿ ವಾರ್ಡ್ ಪುನರ್ ವಿಂಗಡಣೆ ಅನಿವಾರ್ಯವಾಗಿದೆ. ಲೋಪಸರಿಪಡಿಸಿಕೊಂಡು ಹೊಸದಾಗಿ ವಾರ್ಡ್ ಪುನರ್ ವಿಂಗಡಣೆ ಮಾಡಬೇಕಿದೆ. ಹೀಗಾಗಿ ಮತ್ತಷ್ಟು ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದರು. ಈ ಮನವಿಯನ್ನು ಪುರಸ್ಕರಿಸಿದ ಹೈಕೋರ್ಟ್ 12 ವಾರಗಳ ಕಾಲಾವಕಾಶ ನೀಡಿದೆ.