alex Certify BIG NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಬಡ್ತಿ ಲಿಖಿತ ಪರೀಕ್ಷೆ ಮುಂದೂಡಿಕೆ, ಹೀಗಿದೆ ನೂತನ ವೇಳಾಪಟ್ಟಿ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಬಡ್ತಿ ಲಿಖಿತ ಪರೀಕ್ಷೆ ಮುಂದೂಡಿಕೆ, ಹೀಗಿದೆ ನೂತನ ವೇಳಾಪಟ್ಟಿ.!

ಬೆಂಗಳೂರು : 2023-24ನೇ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮುಂದೂಡಲಾಗಿದೆ.

ಈ ಮೊದಲು 15/04/2024 ರಿಂದ 17/04/2024ರವರೆಗೆ ಪರೀಕ್ಷೆ ನಡೆಸಲು ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಅದರೆ ಉಲ್ಲೇಖಿತ-3 ರಲ್ಲಿನ ಅಧ್ಯಕ್ಷರು, ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕಾರ ಪರಿಷತ್ ಬೆಂಗಳೂರು ಇವರ ಪತ್ರದನುಸಾರ ಪ್ರಸ್ತುತ ನಿಗಧಿಪಡಿಸಿರುವ ಪರೀಕ್ಷಾ ರಿಂದ ದಿನಗಳಂದು ಎಸ್.ಎಸ್.ಎಲ್.ಸಿ ಪರೀಕ್ಷಾ ಮೌಲ್ಯಮಾಪನ ಕಾರ್ಯ ನಡೆಯುವುದರಿಂದ ಹಾಗೂ ಶಿಕ್ಷಕರು/ಅಧಿಕಾರಿಗಳನ್ನು ಲೋಕಸಭಾ ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗುತ್ತಿರುವುದರಿಂದ ಆಡಳಿತಾತ್ಮಕ ಹಿತದೃಷ್ಟಿಯಿಂದ ಕೆಳಕಂಡಂತೆ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ (Specified Post) ಲಿಖಿತ ಪರೀಕ್ಷಾ ದಿನಾಂಕಗಳನ್ನು ಮುಂದೂಡಿ ದಿನಾಂಕ: 14/05/2024 ರಿಂದ 16/05/2024ರವರೆಗೆ ನಡೆಸಲು ತೀರ್ಮಾನಿಸಿ ವೇಳಾಪಟ್ಟಿಯನ್ನು ಕೆಳಕಂಡಂತೆ ಪರಿಷ್ಕರಿಸಿ ಆದೇಶಿಸಿದೆ. ಉಳಿದಂತೆ ಈಗಾಗಲೇ ಹೊರಡಿಸಲಾಗಿರುವ ಮಾರ್ಗಸೂಚಿ ಅಂಶಗಳಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಸುತ್ತೋಲೆ ಹೊರಡಿಸಲಾಗಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...