ಜನಾರ್ದನ್ ಚಿಕ್ಕಣ್ಣ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಪೌಡರ್’ ಚಿತ್ರದ ಟ್ರೈಲರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಈ ಟ್ರೈಲರ್ ರಿಲೀಸ್ ಆದ ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವುದಲ್ಲದೆ ನೋಡುಗರ ಗಮನ ಸೆಳೆದಿದೆ.
ಈ ಚಿತ್ರದಲ್ಲಿ ದಿಗಂತ್ ಮಂಚಾಲೆ, ಧನ್ಯ ರಾಮ್ ಕುಮಾರ್, ಶರ್ಮಿಳಾ ಮಾಂಡ್ರೆ ಸೇರಿದಂತೆ ಅನಿರುದ್ಧ್ ಆಚಾರ್ಯ, ರಂಗಾಯಣ ರಘು, ಗೋಪಾಲಕೃಷ್ಣ ದೇಶಪಾಂಡೆ, ರವಿಶಂಕರ್ ಗೌಡ ಬಣ್ಣ ಹಚ್ಚಿದ್ದಾರೆ. ಕೆ ಆರ್ ಜಿ ಸ್ಟುಡಿಯೋಸ್ ಬ್ಯಾನರ್ ನಲ್ಲಿ ಕಾರ್ತಿಕ್ ಗೌಡ, ಯೋಗಿ ಜಿ ರಾಜ್, ವಿಜಯ್ ಸುಬ್ರಮಣ್ಯಂ ನಿರ್ಮಾಣ ಮಾಡಿದ್ದಾರೆ. ಎನ್ ಹರಿ ಕೃಷ್ಣ, ಮತ್ತು ಗೌತಮ್ ಪಲ್ಲಕ್ಕಿ ಅವರ ಸಂಕಲನ, ಅರ್ಜುನ್ ರಾಜ್ ಸಾಹಸ ನಿರ್ದೇಶನವಿದ್ದು, ತ್ರಿಲೋಕ್ ತ್ರಿವಿಕ್ರಂ ಸಂಭಾಷಣೆ ಬರೆದಿದ್ದಾರೆ.