alex Certify ಶಿವಮೊಗ್ಗದ ಈ ಪ್ರದೇಶಗಳಲ್ಲಿ ಇಂದು, ನಾಳೆ ವಿದ್ಯುತ್ ವ್ಯತ್ಯಯ |Power Cut | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗದ ಈ ಪ್ರದೇಶಗಳಲ್ಲಿ ಇಂದು, ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ನಗರ ಉಪವಿಭಾಗ-2 ರ ಘಟಕ-4 ರ ಕೆಆರ್ ಪುರಂ ಮತ್ತು ಘಟಕ 6 ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ 11 ಕೆವಿ ನಿರ್ವಹಣೆ ಕಾಮಗಾರಿ ಇರುವ ಕಾರಣ ಸೆ.24 ರ ಬೆಳಿಗ್ಗೆ ಇಂದು  9 ರಿಂದ ಸಂಜೆ 6  ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಗೋಪಿಶೆಟ್ಟಿಕೊಪ್ಪ, ಜಿ.ಎಸ್ ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಲೀಂ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹಚ್ಬಿ ಕಾಲೋನಿ, ಹಳೇ ಗೋಪಿಶೆಟ್ಟಿಕೊಪ್ಪ, ಮಲ್ಲಿಕಾರ್ಜುನ ಬಡಾವಣೆ, ಅನುಪಿನಕಟ್ಟೆ ಮುಖ್ಯರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸೆ.25 ರಂದು ಪವರ್ ಕಟ್

ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2 ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಸೆ.25 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಬೆಳಗೂರು ಕಾಂಪ್ಲೆಕ್ಸ್, ದುರ್ಗಿಗುಡಿ 1ನೇ ಮತ್ತು 2ನೇ ಪ್ಯಾರಲಲ್ ರಸ್ತೆ, ಎಲ್.ಎಲ್.ಆರ್ ರಸ್ತೆಯಿಂದ ಶಿವಮೊಗ್ಗ ಡಯಾಗ್ನೋಸ್ಟಿಕ್ ಸೆಂಟರ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...