
ಮೊಳಕಾಲ್ಮೂರು: ವಿದ್ಯುತ್ ಕಡಿತವಾದ ಹಿನ್ನೆಲೆಯಲ್ಲಿ ಮೊಳಕಾಲ್ಮೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಒಂದು ವಾರದಿಂದ ಮೇಣದಬತ್ತಿ ಬೆಳಕಿನಲ್ಲೇ ರೋಗಿಗಳಿಗೆ ಚಿಕಿತ್ಸೆ ನೀಡುವ ಪರಿಸ್ಥಿತಿ ಎದುರಾಗಿದೆ.
ರೋಗಿಗಳು ಮೊಬೈಲ್ ಟಾರ್ಚ್ ಆನ್ ಮಾಡಿ ಮಾಡಿಕೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರು ಮೇಣದಬತ್ತಿ ಬೆಳಕಿನಲ್ಲಿ ಚಿಕಿತ್ಸೆ ನೀಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಕಳೆದ ನಾಲ್ಕೈದು ದಿನಗಳಿಂದ ಈ ಭಾಗದಲ್ಲಿ ಮಳೆಯಾಗುತ್ತಿದ್ದು, ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತವಾಗಿದ್ದರಿಂದ ಸಮಸ್ಯೆ ಎದುರಾಗಿದೆ. ಹೀಗಾಗಿ ಮೇಣದಬತ್ತಿ ಬೆಳಕಿನಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.