ಬೆಂಗಳೂರು: ರಾಜ್ಯದ ಜನತೆಗೆ ಶೀಘ್ರದಲ್ಲೇ ವಿದ್ಯುತ್ ದರ ಏರಿಕೆ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಪ್ರತಿ ಯೂನಿಟ್ ದರ ಹೆಚ್ಚಳ ಮಾಡುವಂತೆ ವಿದ್ಯುತ್ ಸರಬರಾಜು ಕಂಪನಿಗಳು ಮನವಿ ಮಾಡಿವೆ ಎಂದು ತಿಳಿದುಬಂದಿದೆ.
ಬೆಸ್ಕಾಂ ಸೇರಿದಂತೆ ರಾಜ್ಯದ ಎಲ್ಲಾ ವಿದ್ಯುತ್ ಸರಬರಾಜು ನಿಗಮಗಳು ಮುಂದಿನ ಮೂರು ವರ್ಷಗಳಿಗೆ ಅನುಗುಣವಾಗುವಂತೆ ವಿದ್ಯುತ್ ದರ ಹೆಚ್ಚಳ ಮಾಡುವಂತೆ ಕೆಇಆರ್ ಸಿಗೆ ಪ್ರಸ್ತಾವನೆ ಸಲ್ಲಿಸಿವೆ.
ಇದರಂತೆ 2025-26ರಲ್ಲಿ ಪ್ರತಿ ಯೂನಿಟ್ ಗೆ 67 ಪೈಸೆ, 2026-27ರಲ್ಲಿ ಪ್ರತಿ ಯೂನಿಟ್ ಗೆ 75 ಪೈಸೆ ಹಾಗೂ 2027-28ರಲ್ಲಿ ಪ್ರತಿ ಯೂನಿಟ್ ಗೆ 91 ಪೈಸೆಯಂತೆ ದರ ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶೀಘ್ರದಲ್ಲೇ ಗ್ರಾಹಕರಿಗೆ ಕರೆಂಟ್ ಶಾಕ್ ಹೊಡೆಯುವ ಸಾಧ್ಯತೆ ದಟ್ಟವಾಗಿದೆ