ಶಿವಮೊಗ್ಗ: ವಿದ್ಯುತ್ ಅಭಾವದ ಬಗ್ಗೆ ಸ್ವತ: ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡಿದ್ದರೂ ಶಿಕ್ಷಣ ಸಚಿವ ಮಧು ಬಂಗಾರಪ್ಪ, ನಮ್ಮಲ್ಲಿ ವಿದ್ಯುತ್ ಸಮಸ್ಯೆಯೇ ಇಲ್ಲ ಎಂದು ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ನಮ್ಮಲ್ಲಿ ವಿದ್ಯುತ್ ಸಮಸ್ಯೆ ಇಲ್ಲ. ಆದರೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಾಸವಾಗಬಹುದು ಅಷ್ಟೇ. ವಿದ್ಯುತ್ ಇಲ್ಲ ಅಂತಾ ಬಿಜೆಪಿಯವರು ಅಪಪ್ರಚಾರ ಮಾಡಿದರು ಎಂದು ಹೇಳಿದ್ದಾರೆ.
ಇದೇ ವೇಳೆ ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ವಾಗ್ದಾಳಿ ನಡೆಸಿದ ಮಧು ಬಂಗಾರಪ್ಪ, ಆರ್.ಅಶೋಕ್ ಸರ್ಕಾರ ಪತನವಾಗುತ್ತೆ ಎಂದಿದ್ದಾರೆ. ಅಶೋಕ್ ಡಿಸಿಎಂ ಆಗಿದ್ದವರು. ಸರ್ಕಾರ ನಡೆಸಿದ ಅನುಭವವಿದೆ. ವಿಪಕ್ಷ ನಾಯಕರು ಆಡಳಿತ ಪಕ್ಷಕ್ಕೆ ಸಲಹೆ ಸಹಕಾರ ನೀಡಬೇಕು. ಅದು ಬಿಟ್ಟು ಸರ್ಕಾರ ಬೀಳಿಸುವುದೇ ಅವರ ಕೆಲಸವಲ್ಲ. ಮನಸ್ಸಿಗೆ ಬಂದಂತೆ ಮಾತನಾಡುವುದೇ ಬಿಜೆಪಿ ನಾಯಕರ ಕೆಲಸವಾಗಿದೆ ಎಂದು ಕಿಡಿಕಾರಿದರು.