ದಾವಣಗೆರೆ: ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಮೊದಲ ದಿನ 5 ಅಭ್ಯರ್ಥಿಗಳಿಂದ 6 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ. ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಡಾ. ಪ್ರಭಾ ಮಲ್ಲಿಕಾರ್ಜುನ್ ಎರಡು ನಾಮಪತ್ರ, ತಿಪ್ಪೇಸ್ವಾಮಿ ಕೆ.ಎ ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ(ಕಮುನಿಸ್ಟ್), ಉತ್ತಮ ಪ್ರಜಾಕೀಯ ಪಕ್ಷದಿಂದ ಈಶ್ವರ, ಕೆ.ಆರ್.ಎಸ್. ಪಕ್ಷದಿಂದ ರಾಘವೇಂದ್ರ ಜಿ.ಪಿ. ಹಾಗೂ ಪಕ್ಷೇತರರಾಗಿ ವಿನಯ್ಕುಮಾರ್ ಜಿ.ಬಿ. ಇವರು ನಾಮಪತ್ರ ಸಲ್ಲಿಸಿದ್ದಾರೆ.