ಬೀದರ್ : ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ಮತ್ತೆ ಟಿಕೆಟ್ ನೀಡದಂತೆ ಮಾಜಿ ಸಚಿವ ಪ್ರಭು ಚೌಹ್ಹಾಣ್ ಬಿವೈ ವಿಜಯೇಂದ್ರ ಕಾಲಿಗೆ ಬಿದ್ದ ಘಟನೆ ನಡೆದಿದೆ.
ಬೀದರ್ ಜಿಲ್ಲಾ ಬಿಜೆಪಿ ಅಧ್ಯಕ್ಷರ ಪದಗ್ರಹಣ ಸಮಾರಂಭ ಕಾರ್ಯಕ್ರಮದಲ್ಲಿ ವಿಜಯೇಂದ್ರರ ಕಾಲಿಗೆ ಬಿದ್ದ ಪ್ರಭು ಚೌಹಾಣ್, ಭಗವಂತ ಖೂಬಾ ಅವರಿಗೆ ಮತ್ತೆ ಟಿಕೆಟ್ ನೀಡಬೇಡಿ, ಬೀದರ್ ಲೋಕಸಭಾ ಕ್ಷೇತ್ರದ ಟಿಕೆಟ್ ಸಾಮಾನ್ಯ ಕಾರ್ಯಕರ್ತನಿಗೆ ನೀಡುವಂತೆ ಮನವಿ ಮಾಡಿದ್ದಾರೆ.
ಭಗವಂತ ಖೂಬಾ ಅವರು ಬಿಜೆಪಿ ಪಕ್ಷದ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ವಿಧಾನಸಭಾ ಚುನಾವಣೆ ಸಮಯದಲ್ಲಿ ನಮ್ಮ ಭವಿಷ್ಯ ಹಾಳುಮಾಡುವ ಪ್ರಯತ್ನ ನಡೆಸಿದ್ದರು ಎಂದು ಪ್ರಭು ಚೌಹ್ಹಾಣ್ ಇತ್ತೀಚೆಗೆ ಗಂಭೀರ ಆರೋಪ ಮಾಡಿದ್ದರು. ಭಗವಂತ ಖೂಬಾಗೆ ಟಿಕೆಟ್ ನೀಡದಂತೆ ಭಾರಿ ಒತ್ತಾಯಗಳು ಕೇಳಿಬರುತ್ತಿದ್ದು, ಬಿಜೆಪಿಯಲ್ಲೇ ಬಿರುಕು ಉಂಟಾಗಿದೆ.