ಮಂಗಳೂರು: ಗೋರಕ್ಷಕರ ಮೇಲಿನ ಕೇಸ್ ಕೈ ಬಿಡಲಾಗುವುದು ಎಂದು ಪಶುಸಂಗೋಪನೆ ಸಚಿವ ಪ್ರಭು ಚವಾಣ್ ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ರಾಜ್ಯದಲ್ಲಿ ಗೋ ಸಾಗಣೆ ತಡೆಗೆ ಗೋರಕ್ಷಕರ ಮೇಲೆ ದಾಖಲಾದ ಎಲ್ಲ ಪ್ರಕರಣಗಳನ್ನು ವಾಪಸ್ ಪಡೆಯುವ ಕುರಿತು ಚಿಂತನೆ ನಡೆದಿದೆ. ಗೃಹ ಸಚಿವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಅಕ್ರಮವಾಗಿ ಗೋವು ಸಾಗಿಸುವುದನ್ನು ತಡೆಯುವ ಕಾರ್ಯಕರ್ತರನ್ನು ಬಂಧಿಸದಂತೆ ಪೊಲೀಸರಿಗೆ ಸೂಚನೆ ನೀಡಿದ ಸಚಿವರು, ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾದ ನಂತರ ಗೋಶಾಲೆಗಳಿಗೆ ಬರುತ್ತಿರುವ ಗೋವುಗಳ ಸಂಖ್ಯೆ ಹೆಚ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ ಗೋಶಾಲೆಗಳಿಗೆ ಹೆಚ್ಚುವರಿ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.