alex Certify ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ: ಸಚಿವ ಪ್ರಭು ಚವ್ಹಾಣ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ: ಸಚಿವ ಪ್ರಭು ಚವ್ಹಾಣ್

ಬೆಳಗಾವಿ: ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಅನುಮತಿ ದೊರೆತಿದೆ.

ಪಶುಸಂಗೋಪನೆ ಇಲಾಖೆಯಲ್ಲಿ ಹಲವಾರು ವರ್ಷಗಳಿಂದ ಹುದ್ದೆಗಳು ಖಾಲಿ ಇದ್ದುದರಿಂದ ಸಮರ್ಪಕವಾಗಿ ಯೋಜನೆಗಳ ಅನುಷ್ಠಾನಕ್ಕೆ ತೊಂದರೆಯಾಗುತ್ತಿತ್ತು. ಗೋಹತ್ಯೆ ನಿಷೇಧ ಕಾಯ್ದೆ, ಜಿಲ್ಲೆಗೊಂದು ಗೋಶಾಲೆ, ಪ್ರಾಣಿ ಕಲ್ಯಾಣ ಸಹಾಯವಾಣಿ ಸೇರಿದಂತೆ ಇತ್ತೀಚೆಗೆ ಪರಿಚಯಿಸಿದ ಇಲಾಖೆಯ ಯೋಜನೆಗಳಿಗೆ ಸಿಬ್ಬಂದಿ ಕೊರತೆಯಿಂದ ಹಿನ್ನಡೆ ಆಗುತ್ತಿತ್ತು.

ಪ್ರತಿ ಬಾರಿ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ಕೊರತೆ ನೀಗಿಸಲು ಮನವಿ ಮಾಡಿಕೊಳ್ಳುತ್ತಿದ್ದರು. ಅಲ್ಲದೆ ಅಧಿವೇಶನದ ಸಂದರ್ಭದಲ್ಲಿ ವಿಧಾನಪರಿಷತ್ ಹಾಗೂ ವಿಧಾನಸಭೆಯಲ್ಲಿ ಸದಸ್ಯರು ತಮ್ಮ ತಮ್ಮ ಜಿಲ್ಲೆಗಳಲ್ಲಿ ಸಿಬ್ಬಂದಿ ಕೊರತೆ ಕುರಿತು ಪ್ರಶ್ನೆ ಹಾಕುವುದು ವಾಡಿಕೆಯಾಗಿತ್ತು.

ಕಳೆದ ಸರ್ಕಾರದ ಅವಧಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ನೇಮಕಾತಿ ಸಚಿವ ಪ್ರಭು ಚವ್ಹಾಣ್ ಚರ್ಚೆ ನಡೆಸಿದ್ದರು. ಅಲ್ಲದೆ, ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪಶುಸಂಗೋಪನೆ ಇಲಾಖೆಗೆ ನೇಮಕಾತಿಯಲ್ಲಿ ಇರುವ ತೊಡಕುಗಳ ಕುರಿತು ಮಾತುಕತೆ ನಡೆಸಲಾಗಿತ್ತು.

ಪಶುಸಂಗೋಪನೆ ಇಲಾಖೆಯಲ್ಲಿ ಗುರುತರ ಬದಲಾವಣೆ ತರುವ ಸಲುವಾಗಿ ಬೇರೆ ಬೇರೆ ರಾಜ್ಯಗಳಿಗೆ ಭೇಟಿ ನೀಡಿದಾಗ ಅಲ್ಲಿನ ಅಭಿವೃದ್ಧಿ ಮಾದರಿಗಳನ್ನು ನಮ್ಮಲ್ಲಿಯೂ ಸಹ ಅಳವಡಿಸಿಕೊಳ್ಳಲು ಸಿಬ್ಬಂದಿ ಕೊರತೆಯಿಂದ  ಪ್ರತಿ ಬಾರಿ ಸಮಸ್ಯೆ ಎದುರಾಗುತ್ತಿತ್ತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕಾರ ಮಾಡಿಕೊಂಡ ನಂತರ ಪಶು ಸಂಗೋಪನೆ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಗಳಿಂದ ಎದುರಾಗುತ್ತಿರುವ ಸಮಸ್ಯೆ ಕುರಿತು ಹಲವು ಬಾರಿ ಚರ್ಚೆ ನಡೆಸಲಾಗಿತ್ತು.

ಈಗ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಯಿಂದಾಗಿ ಇಲಾಖೆಯ ಎಲ್ಲ ಯೋಜನೆಗಳ ಅನುಷ್ಠಾನಕ್ಕೆ ವೇಗ ದೊರೆಯಲಿದ್ದು ಪಶುಸಂಗೋಪನೆ ಇಲಾಖೆ ಮತ್ತಷ್ಟು ಚುರುಕಾಗಿ ಕಾರ್ಯ ನಿರ್ವಹಿಸಲು ಸಹಕಾರಿಯಾಗಲಿದೆ. ಪಶು ಸಂಗೋಪನೆ ಇಲಾಖೆಯಲ್ಲಿ ಪಶುವೈದ್ಯಾಧಿಕಾರಿಗಳ ಹುದ್ದೆ ಭರ್ತಿಗೆ ಅನುವತಿ ದೊರೆತಿದ್ದು, ಸದ್ಯದಲ್ಲೇ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...