alex Certify BIG NEWS: ಸುಗ್ರಿವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಜಾರಿ: ಸಚಿವ ಪ್ರಭು ಚವ್ಹಾಣ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸುಗ್ರಿವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಜಾರಿ: ಸಚಿವ ಪ್ರಭು ಚವ್ಹಾಣ್

ಬೆಂಗಳೂರು: ಕಾಂಗ್ರೆಸ್ ಕುತಂತ್ರದಿಂದ ಕಳೆದ ಅಧಿವೇಶನದಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ ಪರಿಷತ್ತಿನಲ್ಲಿ ಅಂಗೀಕಾರವಾಗಲಿಲ್ಲ ಆದರೆ, ಗೋವುಗಳ ಸಂರಕ್ಷಣೆಗೆ ಬಿಜೆಪಿ ಬದ್ಧವಾಗಿದ್ದು, ಸುಗ್ರಿವಾಜ್ಞೆ ತರುವ ಮೂಲಕ ಮಸೂದೆ ಜಾರಿಗೊಳಿಸಲಾಗ್ತಿದೆ ಎಂದು ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ಇಂದು ನಡೆದ ಸಚಿವ ಸಂಪುಟದಲ್ಲಿ ಗೋಹತ್ಯೆ ಮಸೂದೆಗೆ ಸುಗ್ರಿವಾಜ್ಞೆ ಮೂಲಕ ಗೋಹತ್ಯೆ ಕರ್ನಾಟಕದಲ್ಲೂ ಯಶಸ್ವಿ ಆಗಲಿದೆ ಎಂದು ಸಚಿವರು ಹರ್ಷ ವ್ಯಕ್ತಪಡಿಸಿದ್ದಾರೆ.

ಗೋವು ನಮ್ಮ ಭಾರತೀಯ ಸಂಸ್ಕೃತಿಯ, ಶ್ರದ್ದೆಯ ಹಾಗೂ ರೈತರ ಜೀವನಾಧಾರದ ಮೂಲವಾಗಿದೆ. ವರ್ಷದಿಂದ ವರ್ಷಕ್ಕೆ ಗೋವುಗಳ ಸಂಖ್ಯೆ ಗಣನೀಯವಾಗಿ ಕಡಿಮೆ ಆಗುತ್ತಿರುವುದು ನೀಜಕ್ಕೂ ಕಳವಳಕಾರಿ ಸಂಗತಿಯಾಗಿದೆ. ಇಂತಹ ಸಂದರ್ಭದಲ್ಲಿ ಪಕ್ಷಭೇದವನ್ನು ಮರೆತು ಗೋವುಗಳ ಸಂರಕ್ಷಣೆಗೆ ಎಲ್ಲರೂ ಮುಂದಾದರೆ ನಾಡಿನ ಪಶುಸಂಪತ್ತು ವೃದ್ಧಿಸುತ್ತದೆ. ಕೇವಲ ರಾಜಕೀಯ ದುರುದ್ದೇಶಕ್ಕೆ ಮಸೂದೆಯನ್ನು ವಿರೋಧಿಸಿ ಸಮಾಜದಲ್ಲಿ ಜನಸಾಮಾನ್ಯರ ನಡುವೆ ತಪ್ಪು ಕಲ್ಪನೆ ಮೂಡಿಸುವುದು ಅಸಹನೀಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ 2010 ರಲ್ಲಿ ಗೋಹತ್ಯೆ ನಿಷೇಧ ಮಸೂದೆ ಮಂಡನೆ ಮಾಡಿದಾಗ, ಕೇಂದ್ರ ಸರ್ಕಾರಕ್ಕೆ ಇದ್ದ ಆಕ್ಷೇಪಣೆಗಳನ್ನು ಈಗಿನ ಮಸೂದೆಯಲ್ಲಿ ಸರಿಪಡಿಸಲಾಗಿದೆ. ಹಳೆಯ ಮಸೂದೆಯಲ್ಲಿ ಎಮ್ಮೆ /ಕೋಣಗಳ ಹತ್ಯೆಗೂ ನಿಷೇಧವಿತ್ತು. ಆದರೆ, 2020 ರ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕದಲ್ಲಿ  13 ವರ್ಷದ ಎಮ್ಮೆ/ಕೋಣಗಳಿಗೆ ನಿರ್ಬಂಧ ವಿರುತ್ತದೆ. ಹಾಗಾಗಿ ಕಾಂಗ್ರೆಸ್ ಸರ್ಕಾರದ ಸಮಯದಲ್ಲಿ ಇದ್ದ ಆಕ್ಷೇಪಕಣೆ ಇಲ್ಲಿ ಪರಿಗಣನೆಗೆ ತೆಗೆದುಕೊಂಡು ಮಸೂದೆ ರೂಪಿಸಲಾಗಿದೆ. ಹೀಗಿದ್ದಾಗಲೂ ಇದನ್ನು ಕಾಂಗ್ರೆಸ್ ವಿರೊಧಿಸುತ್ತಿರುವುದು ನಾಚಿಕೆಗೇಡು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

2019 ರ ಜಾನುವಾರು ಗಣತಿ ಪ್ರಕಾರ, 2,38,296 ಗೋವುಗಳನ್ನು ಪ್ರತಿವರ್ಷ ವಧೆ ಮಾಡಲಾಗುತ್ತಿದೆ. ಒಂದು ದಿನದ ವಿಳಂಬವು 662 ಗೋವುಗಳ ವಧೆಗೆ ಕಾರಣವಾಗುತ್ತದೆ. ಇದು ಎಚ್ಚರಿಕೆಯ ಗಂಟೆ. ಇದೇ ವೇಗದಲ್ಲಿ ಗೋವುಗಳ ವಧೆ ನಡೆಯುತ್ತ ಹೋದರೆ ಮುಂದಿನ ದಿನಗಳಲ್ಲಿ ಗೋವುಗಳನ್ನು ಪುಸ್ತಕಗಳಲ್ಲಿ ನೋಡುವ ಸಮಯ ದೂರವಿಲ್ಲ. ಅಕ್ರಮ ಗೋವುಗಳ ಸಾಗಣೆ ಮತ್ತು ವಧೆ ತಡೆಯುವುದು ನಮ್ಮ ತುರ್ತು ಆದ್ಯತೆಯಾಗಿದೆ. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ ಜಾರಿಗೆ ಬಂದರೆ ಈ ಅಕ್ರಮಗಳಿಗೆ ಕಡಿವಾಣ ಬೀಳಲಿದೆ ಎಂದು ತಿಳಿಸಿದ್ದಾರೆ.

ಗೋವುಗಳ ಸಂರಕ್ಷಣೆಗೆ ಉತ್ತರಪ್ರದೇಶ ಮತ್ತು ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ವಿಭಿನ್ನವಾದ ಪ್ರಯೋಗಗಳು ನಡೆಯುತ್ತಿದ್ದು, ಗೋವುಗಳ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದ ಏರಿಕೆ ಕಂಡುಬಂದಿದೆ. ಉದ್ಯೋಗ ಸೃಷ್ಟಿ, ಗೋವಿನ ದೇಶಿ ಉತ್ಪನ್ನಗಳ ಮಾರಾಟ ಮತ್ತು ಬಳಕೆ ಸಹ ಹೆಚ್ಚುತ್ತಿದೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಸಚಿವ ಸಂಪುಟ ಸಹೋದ್ಯೋಗಿಗಳಿಗೆ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ರಾಜ್ಯದ ಎಲ್ಲ ಗೋವುಗಳ ಸಂರಕ್ಷಣೆಯಲ್ಲಿ ತೊಡಗಿರುವುವರಿಗೆ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...