alex Certify GOOD NEWS: ವಿದೇಶಿ ವಿವಿಗಳಲ್ಲಿ ಅಧ್ಯಯನಕ್ಕೆ ‘ಪ್ರಬುದ್ಧ ಯೋಜನೆ’ ಮುಂದುವರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ವಿದೇಶಿ ವಿವಿಗಳಲ್ಲಿ ಅಧ್ಯಯನಕ್ಕೆ ‘ಪ್ರಬುದ್ಧ ಯೋಜನೆ’ ಮುಂದುವರಿಕೆ

ಬೆಂಗಳೂರು: ವಿದೇಶಿ ವಿದ್ಯಾಲಯಗಳಲ್ಲಿ ಪಿ.ಹೆಚ್.ಡಿ. ಅಧ್ಯಯನಕ್ಕಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಂಶೋಧನಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರಬುದ್ಧ ಯೋಜನೆಯಡಿ ಸಹಾಯಧನ ಮುಂದುವರಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.

ಪ್ರಬುದ್ಧ ಯೋಜನೆಯನ್ನು 2023 -24ನೇ ಸಾಲಿನಿಂದ ಕೈ ಬಿಡಲಾಗಿದೆ. ಯೋಜನೆ ಮುಂದುವರೆಸಬೇಕೆಂಬ ಒತ್ತಾಯ ಕೇಳಿ ಬಂದಿತ್ತು.

ಪ್ರಬುದ್ಧ ಯೋಜನೆಯಡಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ವಿದೇಶದಲ್ಲಿ ಪಿ.ಹೆಚ್.ಡಿ. ಅಧ್ಯಯನಕ್ಕೆ ಸಂಬಂಧಿಸಿದಂತೆ ಕೆಲವು ಗೊಂದಲ ಉಂಟಾಗಿದೆ. ಈ ಯೋಜನೆ ಹಿಂದಿನ ರೀತಿಯಲ್ಲೇ ಮುಂದುವರಿಕೆ ಬಗ್ಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.

ಪರಿಶಿಷ್ಟ ಸಮುದಾಯದ ಜನರು ವಿದೇಶಗಳಲ್ಲಿ ಉನ್ನತ ವ್ಯಾಸಂಗ ಮಾಡಿದಾಗ ಮಾತ್ರ ಅವರು ಘನತೆಯುತ ಸ್ಥಾನಗಳಿಗೆ ಏರಲು ಸಾಧ್ಯ ಎಂಬ ಬಾಬಾ ಸಾಹೇಬರ ಆಶಯಗಳನ್ನು ಸಾಕಾರಗೊಳಿಸುವುದು ನಮ್ಮ ಜವಾಬ್ದಾರಿಯೇ ಆಗಿದೆ. ಈ ಹಿನ್ನಲೆಯಲ್ಲಿ ಈ ಹಿಂದಿನಂತೆಯೇ ವಿಶ್ವದ ಅಗ್ರ 100 ವಿಶ್ವವಿದ್ಯಾಲಯಗಳಲ್ಲಿ ಪಿ.ಹೆಚ್.ಡಿ. ವ್ಯಾಸಂಗಕ್ಕೆ ಆಯ್ಕೆಯಾಗುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಈ ಯೋಜನೆಯ ಅನುಕೂಲ ಸಿಗಲಿದೆ.

ಈ ಯೋಜನೆಯನ್ನು ಮುಂದುವರೆಸುವ ಕುರಿತು ನಮ್ಮ ಇಲಾಖೆಯ ಅಧಿಕಾರಿಗಳಿಗೆ ನಾನು ಸೂಚನೆ ನೀಡಿದ್ದು, ಸಮುದಾಯದ ಬಂಧುಗಳು ಈ ವಿಷಯದಲ್ಲಿ ಗೊಂದಲಗಳಿಗೆ ಎಡೆ ಮಾಡಿಕೊಡಬಾರದೆಂದು ಸಚಿವರು ವಿನಂತಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...