
ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಅವರೊಂದಿಗೆ ನಟಿಸಲು ಆಫರ್ ನೀಡಲಾಗಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಡೈಲಾಗ್ ಗಳ ಮೂಲಕವೇ ಗಮನಸೆಳೆದಿದ್ದ ಪ್ರದೀಪ್ ಈಶ್ವರ್ ಶಾಸಕರಾಗಿ ಆಯ್ಕೆಯಾಗಿದ್ದರು. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಡಾ. ಕೆ. ಸುಧಾಕರ್ ವಿರುದ್ಧ ಕಾಂಗ್ರೆಸ್ ನಿಂದ ಅಚ್ಚರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರದೀಪ್ ಈಶ್ವರ್ ಜಯ ಗಳಿಸಿದ್ದರು.
ಮಾತುಗಾರಿಕೆಯಿಂದಲೇ ಹೆಸರಾದ ಪ್ರದೀಪ್ ಈಶ್ವರ್ ಅವರಿಗೆ ಇದೀಗ ಟಾಲಿವುಡ್ ನಿಂದ ಆಫರ್ ಬಂದಿದೆ. ಮೆಗಾಸ್ಟಾರ್ ಚಿರಂಜೀವಿ ಅವರೊಂದಿಗೆ ನಟಿಸಲು ಆಫರ್ ನೀಡಲಾಗಿದೆ. ಸಾಮಾಜಿಕ ಕ್ರಾಂತಿಯ ಸಿನಿಮಾವೊಂದರಲ್ಲಿ ಅಭಿನಯಿಸಲು ಚಿರಂಜೀವಿ ತಯಾರಿ ನಡೆಸಿದ್ದಾರೆ. ಈ ಚಿತ್ರ ನಿರ್ದೇಶಸುತ್ತಿರುವ ಖ್ಯಾತ ನಿರ್ದೇಶಕರೊಬ್ಬರು ಶಾಸಕ ಪ್ರದೀಪ್ ಈಶ್ವರ್ ಗೆ ಕರೆ ಮಾಡಿ ಆಫರ್ ನೀಡಿದ್ದಾರೆ ಎನ್ನಲಾಗಿದೆ.