ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ಡಾ.ಕೆ. ಸುಧಾಕರ್ ಸ್ಪರ್ಧಿಸಿದಲ್ಲಿ ನನಗೂ ಟಿಕೆಟ್ ಕೊಡುವಂತೆ ಕಾಂಗ್ರೆಸ್ ಹೈಕಮಾಂಡ್ ಗೆ ಕೇಳುತ್ತೇನೆ. ಅವಕಾಶ ನೀಡಿದಲ್ಲಿ ಸ್ಪರ್ಧಿಸಿ ಗೆಲ್ಲುತ್ತೇನೆ ಎಂದು ಶಾಸಕ ಪ್ರದೀಪ್ ಈಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಕ್ಕಬಳ್ಳಾಪುರ, ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿ ಈ ಬಾರಿ ಕಾಂಗ್ರೆಸ್ ಶೇಕಡ 100ರಷ್ಟು ಗೆಲ್ಲುತ್ತದೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿಗೆ ಐದಾರು ಸೀಟು ಬಂದರೆ ಹೆಚ್ಚು. ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಡಾ. ಕೆ. ಸುಧಾಕರ್ ವಿರುದ್ಧ ಸ್ಪರ್ಧೆಗೆ ಸಿದ್ದವಿರುವೆ. ಪಕ್ಷ ಅವಕಾಶ ನೀಡಿದರೆ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.