alex Certify ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ : ರೈತ ಸಮುದಾಯಕ್ಕೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ : ರೈತ ಸಮುದಾಯಕ್ಕೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ಬೆಳೆ ವಿಮೆಗೆ ನೊಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ಬ್ಯಾಂಕುಗಳಲ್ಲಿ ವಿಮೆ ಮಾಡಿಸಬೇಕು.

ಈ ಯೋಜನೆಯಡಿ ಹಿಂಗಾರು ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ಬೆಳೆಗಳಾದ ಜೋಳ(ನೀ), ಕಡಲೆ(ನೀ/ಮ) ಹಾಗೂ ಬೇಸಿಗೆ ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ಬೆಳೆಗಳಾದ ನೆಲಗಡಲೆ(ಶೇಂಗಾ)(ನೀ), ಭತ್ತ(ನೀ), ಹಾಗೂ ಹೋಬಳಿ ಮಟ್ಟದ ಹಿಂಗಾರು ಹಂಗಾಮಿನ ಬೆಳೆಗಳಾದ ಮುಸುಕಿನ ಜೋಳ(ನೀ), ಜೋಳ(ಮ), ಹುರುಳಿ(ಮ), ಸೂರ್ಯಕಾಂತಿ(ನೀ/ಮ)  ಕುಸುಮೆ(ಮ), ಈರುಳ್ಳಿ(ನೀ), ಮತ್ತು ಬೇಸಿಗೆ ಹಂಗಾಮಿನ ಸೂರ್ಯಕಾಂತಿ(ನೀ) ,ಈರುಳ್ಳಿ(ನೀ) ಬೆಳೆಗಳಾಗಿವೆ.

ಬೆಳೆ ವಿಮೆಯನ್ನು ಮಾಡಿಸಲು ವಿವಿಧ ಬೆಳೆಗಳಿಗೆ ಕೊನೆಯ ದಿನಾಂಕ ಇಂತಿವೆ: ಹಿಂಗಾರು ಹಂಗಾಮಿನ ಬೆಳೆಗಳಾದ ಜೋಳ(ನೀ)-ಡಿ.30, ಜೋಳ(ಮ)-ನ.15, ಮುಸುಕಿನ ಜೋಳ(ನೀ)-ಡಿ.15, ಕಡಲೆ(ನೀ/ಮ)-ಡಿ.30, ಹುರುಳಿ(ಮ)-ಡಿ.01, ಸೂರ್ಯಕಾಂತಿ(ನೀ/ಮ)-ಡಿ.15, ಕುಸುಮೆ(ಮ)-ಡಿ.15, ಈರುಳ್ಳಿ(ನೀ)-ಡಿ.01, ಬೇಸಿಗೆ ಬೆಳೆಗಳಾದ ಭತ್ತ(ನೀ)-2024 ಫೆ.28, ನೆಲಗಡಲೆ(ಶೇಂಗಾ)(ನೀ)-2024 ಫೆ.28, ಸೂರ್ಯಕಾಂತಿ(ನೀ)-2024 ಫೆ.28 ಮತ್ತು ಈರುಳ್ಳಿ(ನೀ)-2024 ಫೆ.28.

ಈ ಮೇಲ್ಕಂಡ ದಿನಾಂಕಗಳಂದು ಮುಕ್ತಾಯಗೊಳ್ಳಲಿದ್ದು, ಈ ಯೋಜನೆಯ ಲಾಭ ಪಡೆಯಲು ಯಾವುದೇ ಸ್ಥಳೀಯ ಬ್ಯಾಂಕ್‍ಗಳು/ಸಾರ್ವಜನಿಕ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...