ಹುಬ್ಬಳ್ಳಿ : ರಾಮಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಬಂಧನದ ಹಿಂದೆ ಪ್ರಹ್ಲಾದ್ ಜೋಶಿ ಕೈವಾಡವಿದೆ ಎಂದು ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಈ ಹಿಂದೆ ಬಿಜೆಪಿ 7-8 ವರ್ಷ ಅಧಿಕಾರದಲ್ಲಿತ್ತು, ಆಗ ಯಾಕೆ ಬಿಜೆಪಿ ಸರ್ಕಾರ ಈ ಕೇಸ್ ವಾಪಸ್ ಪಡೆಯಲಿಲ್ಲ. ನಾನು ಕೂಡ ಈ ಹಿಂದೆ ಕೇಸ್ ಹಿಂಪಡೆಯುವ ಪ್ರಯತ್ನ ಮಾಡಿದ್ದೆ ಎಂದು ಹೇಳಿದ್ದಾರೆ.
ಬಿಜೆಪಿ ಅಧಿಕಾರದಲ್ಲಿದ್ದಾಗ ಯಾಕೆ ಈ ಪ್ರಕರಣವನ್ನು ಹಿಂಪಡೆಯುವ ಪ್ರಯತ್ನ ಮಾಡಲಿಲ್ಲ. ಈಗ ಲೋಕಸಭೆ ಚುನಾವಣೆ ಹತ್ತಿರ ಬಂದಾಗ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಚುನಾವಣೆಯನ್ನು ಗೆಲ್ಲುವ ಹುನ್ನಾರ ನಡೆಸುತ್ತಿದೆ ಎಂದು ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.