ಹುಬ್ಬಳ್ಳಿ: ಕೊರೋನಾ ವ್ಯಾಕ್ಸಿನ್ ಮೊದಲು ಪ್ರಧಾನಿ ನರೇಂದ್ರ ಮೋದಿ ಪಡೆಯಬೇಕು ಎಂದು ಕಾಂಗ್ರೆಸ್ ಸೇರಿದಂತೆ ಅನೇಕ ಪಕ್ಷಗಳ ನಾಯಕರು ಹೇಳಿರುವುದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು ಮೋದಿ ವಿರೋಧಿಸುವ ಭರದಲ್ಲಿ ದೇಶವನ್ನು ವಿರೋಧಿಸಬೇಡಿ. ವಿಜ್ಞಾನಿಗಳಿಗೆ ಅಗೌರವ ತೋರುವುದು ಬೇಡವೆಂದು ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಿಜೆಪಿ 30 ಪರ್ಸೆಂಟ್ ಸರ್ಕಾರವೆಂದು ಕಾಂಗ್ರೆಸ್ ನಾಯಕರು ಆರೋಪ ಮಾಡಿರುವುದಕ್ಕೆ ಟಾಂಗ್ ಕೊಟ್ಟಿದ್ದು, ಕಾಂಗ್ರೆಸ್ ಬಗ್ಗೆ ಮಾತನಾಡುವುದು ಅಪ್ರಸ್ತುತ, ಅಪಹಾಸ್ಯವಾಗುತ್ತದೆ ಎಂದು ಹೇಳಿದ್ದಾರೆ.
ಸಂಪುಟ ವಿಸ್ತರಣೆಯ ಬಗ್ಗೆ ಮುಖ್ಯಮಂತ್ರಿಗಳು ಮತ್ತು ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ. ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಿ ಸಿಎಂ ತೀರ್ಮಾನಿಸುತ್ತಾರೆ ಎಂದು ಸಂಪುಟ ವಿಸ್ತರಣೆ ಬಗ್ಗೆ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ.