ಸಿದ್ದರಾಮಯ್ಯ ‘ಸುಳ್ಳು ರಾಮಯ್ಯ’; ಅವರು 10 ಬಾರಿ ರಾಜಕೀಯ ನಿವೃತ್ತಿಯಾಗಬೇಕು; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ, ಸಿದ್ದರಾಮಯ್ಯ ಅಲ್ಲ, ಅವರು ಸುಳ್ಳು ರಾಮಯ್ಯ, ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರಧ್ಲಾದ್ ಜೋಶಿ, ಸಿಎಂ ಸಿದ್ದರಾಮಯ್ಯ ರಾಜ್ಯವನ್ನು ಆರ್ಥಿಕ ದುಸ್ಥಿತಿಗೆ ತಂದು ಈಗ ಕೇಂದ್ರ ಸರ್ಕಾರದ ಕಡೆಗೆ ಬೊಟ್ಟು ಮಾಡುತ್ತಿದ್ದಾರೆ. ಎನ್ ಡಿ ಆರ್ ಎಫ್ ನಲ್ಲಿ ನಾವು 12 ಸಾವಿರ ಕೋಟಿ ಹಣ ಕೊಟ್ಟಿದ್ದೇವೆ. ಡೆವಲೂಷನ್ ಫಂಡ್ ಅವರ ಕಾಲದಲ್ಲಿ 60 ಸಾವಿರ ಕೋಟಿ ಇತ್ತು. ನಮ್ಮ ಅವಧಿಯಲ್ಲಿ 2 ಲಕ್ಷ 36 ಸಾವಿರ ಕೋಟಿ ಕೊಟ್ಟಿದ್ದೇವೆ. ತೆರಿಗೆ ಹಂಚಿಕೆಯಲ್ಲಿ 10 ವರ್ಷಗಳಲ್ಲಿ 81 ಸಾವಿರ ಕೋಟಿ ಹೆಚ್ಚಿದೆ. ನಮ್ಮ ಕಾಲದಲ್ಲಿ 2 ಲಕ್ಷ 85 ಸಾವಿರ ಕೋಟಿ ಕೊಟ್ಟಿದ್ದೇವೆ. ನಾವು ಬಡ್ಡಿ ರಹಿತ ಸಾಲ ಕೊಟ್ಟಿದ್ದೇವೆ. ಆದರೂ ನಾವು ರಾಜ್ಯಕ್ಕೆ ಅನ್ಯಾಯ ಮಾಡುತ್ತಿದ್ದೇವೆ ಎಂದು ಸಿದ್ದರಾಮಯ್ಯ ಆರೋಪಿತ್ತಿದ್ದಾರೆ. ಅವರು ಸುಳ್ಳು ರಾಮಯ್ಯ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ 10 ಬಾರಿ ರಾಜಕೀಯ ನಿವೃತ್ತಿಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಅನುದಾನ ವಿಚಾರವಾಗಿ ಡ್ಯಾಶ್ ಬೋರ್ಡ್ ನಲ್ಲಿ ಎಲ್ಲ ಮಾಹಿತಿ ಹಾಕಿದ್ರು. ಅದನ್ನು ಡೌನ್ ಲೋಡ್ ಮಾಡಲು ಬಿಜೆಪಿ ನಾಯಕರಿಗೆ ಸೂಚಿಸಿದ್ದೆ. ಇದೀಗ ಅಂಕಿ-ಅಂಶವೇ ಡಿಲಿಟ್ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read