BIG NEWS: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ದೇಶವನ್ನು ಮಾವೋವಾದಿ ದೇಶ ಮಾಡಲು ಹೊರಟಿದೆ: ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ದೇಶವನ್ನು ಮಾವೋವಾದಿ ದೇಶ ಮಾಡಲು ಹೊರಟಿದೆ ಎಂಬುದು ರಾಹುಲ್ ಗಾಂಧಿ ಭಾಷಣದಿಂದ ಗೊತ್ತಾಗುತ್ತಿದೆ ಎಂದು ಧಾರವಾಡ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಜನರ ಬಳಿ ಎರಡು ಬೈಕ್, ಮನೆ ಇದ್ದರೆ ಒಂದನ್ನು ಕಸಿದುಕೊಳ್ಳುತ್ತಾರೆ. ಕಾಂಗ್ರೆಸ್ ಪಕ್ಷ ದೇಶಕ್ಕೆ ಸಂಪತ್ತು ಸೃಷ್ಟಿ ಮಾಡುವವರ ವಿರುದ್ಧ ಹೊರಟಿದೆ. ಮಾವೋವಾದಿ ಮನಸ್ಥಿತಿ ಇಟ್ಟುಕೊಂಡು ಎಲ್ಲರನ್ನೂ ಟಾರ್ಗೆಟ್ ಮಾಡುತ್ತಿದ್ದಾರೆ. ಇಂತಹ ಮಾವೋವಾದಿ ವಿಚಾರಗಳ ಬಗ್ಗೆ ಜನ ಎಚ್ಚರವಾಗಿರಬೇಕು ಎಂದು ಕಿಡಿಕಾರಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಪಾಕಿಸ್ತಾನಿ ಮಾದರಿ ಆಡಳಿತ ನಡೆಯುತ್ತಿದೆ. ಕಾಂಗ್ರೆಸ್ ನವರು ತುಷ್ಠೀಕರಣದ ಪರಾಕಾಷ್ಠೆ ತಲುಪುತ್ತಿದ್ದಾರೆ. ನಟಿ ಹರ್ಷಿಕಾ ಪೂಣಚ್ಚ, ಭುವನ್ ಪೊನ್ನಣ್ಣ ಕನ್ನಡ ಮಾತನಾಡಿದ್ದಕ್ಕೆ ಹಲ್ಲೆ ಮಾಡಿದ್ದಾರೆ. ನನ್ನನ್ನು ಭೇಟಿಯಾಗಿ ತಮಗೆ ಸೂಕ್ತ ಭದ್ರತೆ ಇಲ್ಲ ಎಂದು ಹೇಳಲು ಬಂದಿದ್ದರು. ನಟ-ನಟಿಯರಿಗೇ ರಕ್ಷಣೆ ಇಲ್ಲವೆಂದಮೇಲೆ ಸಾಮಾನ್ಯಜರ ಪಾಡೇನು? ಎಂದು ಪ್ರಶ್ಮಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read