ಹುಬ್ಬಳ್ಳಿ: ಇಂಡಿಯಾ ಮೈತ್ರಿ ಕೂಟದ ಅಸ್ತಿತ್ವ ಎಲ್ಲಿದೆ? ತೋರಿಕೆಗಷ್ಟೇ ಇದೊಂದು ಘಟಬಂಧನ್ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಸುಮ್ಮನೆ ಬಲಿಪಶು ಮಾಡಲೆಂದೇ ಮಲ್ಲಿಕಾರ್ಜುನ ಖರ್ಗೆ ಅಅವರನ್ನು ಇಂಡಿಯಾಕೂಟದ ನಾಯಕರನ್ನಾಗಿ ಮಾಡಲಾಗಿದೆ ಅಷ್ಟೆ. ಮಹಾರಾಷ್ಟ್ರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಜಗಳವಾಡುತ್ತಿದ್ದಾರೆ. ಕೇರಳದಲ್ಲಿ ಕಮ್ಯುನಿಸ್ಟ್ ಸರ್ಕಾರವಿದೆ. ಇವರಲ್ಲೇ ಹೊಂದಾಣಿಕೆ ಇಲ್ಲ. ಇನ್ನು ಮೈತ್ರಿಕೂಟ ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.
ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಒಕ್ಕೂಟದಿಂದ ಹೊರಬರುವ ಸಾಧ್ಯತೆ ಕಾಣುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಸೋತರೆ ಗಾಂಧಿ ಕುಟುಂಬದ ಮೇಲೆ ಬರಬಾರದು ಎಂಬ ಕಾರಣಕ್ಕೆ ಬಲಿಪಶು ಮಾಡಲೆಂದೇ ಖರ್ಗೆ ಅವರನ್ನು ಘಟಬಂಧನ್ ನಾಯಕರನ್ನಾಗಿ ಮಾಡಿದ್ದಾರೆ ಎಂದು ಟೀಕಿಸಿದರು.