ಹುಬ್ಬಳ್ಳಿ: ರಾಜ್ಯ ಸರ್ಕಾರ ನೆನೆಗುದಿಗೆ ಬಿದ್ದಿದೆ. ಹೆಚ್ಚಿನ ಡಿಸಿಎಂ ಹುದ್ದೆ ಸೃಷ್ಟಿಯಾಗಬೇಕು, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಅಂತಾರೆ. ಕಾಂಗ್ರೆಸ್ ಗೆ ಕಮಾಂಡ್ ಇಲ್ಲ, ಇನ್ನು ಹೈಕಮಾಂಡ್ ಎಲ್ಲಿ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ನ ಶಾಸಕರೇ ಅಭಿವೃದ್ಧಿಗೆ ದುಡ್ಡು ಕೊಡಿ ಎಂದು ಕೇಳುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಬಳಿ ಅನುದಾನಕ್ಕಾಗಿ ಜಗಳವಾಡುತ್ತಿದ್ದಾರೆ. ನಮ್ಮ ಪರಿಸ್ಥಿತಿ ಕೆಟ್ಟಿದೆ ಎಂದು ಕಾಂಗ್ರೆಸ್ ಶಾಸಕರೇ ಮಾತನಾಡಿಕೊಳ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ವಾಲ್ಮಿಕಿ ನಿಗಮದ ಹಗರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಜವಾಬ್ದಾರಿ ಹೊರಬೇಕು. ಸಿಎಂ ಅದಕ್ಕೂ ನನಗೂ ಸಂಬಂಧವಿಲ್ಲ ಅನ್ನೋ ತರಹ ಇದ್ದಾರೆ. ಮುಖ್ಯಮಂತ್ರಿ ಬಳಿ ಹಣಕಾಸು ಇಲಾಖೆ ಇದೆ. ಸಿಎಂ ಸಿದ್ದರಾಮಯ್ಯ ಗಮನಕ್ಕೆ ಬರದೇ ಹಗರಣ ನಡೆದಿದೆಯಾ? ಸಿದ್ದರಾಮಯ್ಯ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ಸಿಎಂ, ಡಿಸಿಎಂ ಬಗ್ಗೆ ಚರ್ಚೆ ನಡೆಯುತ್ತಿರುವುದುದನ್ನು ನೋಡಿದರೆ ಸರ್ಕಾರ ನಿಷ್ಕ್ರಿಯವಾಗಿದೆ. ಕಾಂಗ್ರೆಸ್ ನವರು ಒಳಜಗಳನ್ನು ಮರೆತು ರಾಜ್ಯದ ಅಭಿವೃದ್ಧಿ ಕಡೆ ಗಮನ ಕೊಡಲಿ ಎಂದು ಹೇಳಿದರು.