alex Certify ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಜನಕ: ಆತ್ಮಸಾಕ್ಷಿ ಇದ್ರೆ ಸಿಎಂ ರಾಜೀನಾಮೆ ನೀಡಲಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಜನಕ: ಆತ್ಮಸಾಕ್ಷಿ ಇದ್ರೆ ಸಿಎಂ ರಾಜೀನಾಮೆ ನೀಡಲಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ

ಹುಬ್ಬಳ್ಳಿ: ಭ್ರಷ್ಟಾಚಾರ ದೇಶಕ್ಕೆ ಅಂಟಿದ ರೋಗ. ಇದರ ನಿರ್ಮೂಲನೆ ಆಗಬೇಕೆಂದರೆ ಜಾತಿ ಲೇಪನ ಮಾಡಿ ಹೋರಾಟ ಮಾಡುವುದಲ್ಲ. ಕಾಂಗ್ರೆಸ್ ನಾಯಕರು ಜಾತಿ ಹೆಸರಲ್ಲಿ ಹೋರಾಟ ನಡೆಸುತ್ತಿರುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ಭ್ರಷ್ಟಾಚಾರಕ್ಕೆ ಯಾವುದೇ ಜಾತಿ ಎಂಬುದಿಲ್ಲ. ಎಲ್ಲಾ ಸಮಾಜ ಮತ್ತು ದೇಶಕ್ಕೆ ಅಂಟಿದ ಪಿಡುಗು. ಹಾಗಾಗಿ ಇದರ ವಿರುದ್ಧ ಹೋರಾಟಕ್ಕಿಳಿದರೆ ಯಾರೂ ಜಾತಿಯ ನೆಪವನ್ನು ಮುಂದಿಡಬಾರದು. ಮುಡಾ ಹಗರಣದಲ್ಲಿ ರಾಜ್ಯಪಾಲರು ತನಿಖೆಗೆ ಅನುಮತಿ ನೀಡುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಹಿಂದ ವರ್ಗವರು ಜಾತಿ ಲೇಪನ ಹಚ್ಚಿ ಬೀದಿಗಿಳಿದು ಹೋರಾಡುವುದು ಸರಿಯಲ್ಲ ಎಂದರು.

ರಾಜ್ಯಪಾಲರು ಅತ್ಯಂತ ಹಿಂದುಳಿದ, ಎಸ್ಸಿ ಸಮಾಜಕ್ಕೆ ಸೇರಿದವರು. ಅಂಥವರ ವಿರುದ್ಧ ಬೀದಿಗಿಳಿಯುವುದು ಕಾಂಗ್ರೆಸ್ಸಿಗೆ ಶೋಭೆ ತರದು. ದೇಶದಲ್ಲಿ ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಜನಕ. ನೆಹರು ಕಾಲದಿಂದ ಮನಮೋಹನ್ ಸಿಂಗ್ ಕಾಲದವರೆಗೂ ಕಾಂಗ್ರೆಸ್ ಭ್ರಷ್ಟಾಚಾರವನ್ನು ಪೋಷಿಸಿಕೊಂಡು ಬಂದಿದೆ. ಹಾಗಾಗಿ ಈಗ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಅವರ ಪರ, ಬೆಂಬಲಕ್ಕೆ ನಿಂತಿದ್ದು, ಇದರಲ್ಲಿ ಆಶ್ಚರ್ಯ ಏನಿಲ್ಲ ಎಂದು ವಾಗ್ದಾಳಿ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆತ್ಮಸಾಕ್ಷಿ ಇದ್ದರೆ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಲಿ. ರಾಜ್ಯದಲ್ಲಿ ನಿಮ್ಮದೇ ಸರ್ಕಾರವಿದೆ. ಸ್ವತಃ ನೀವೇ ಸಿಎಂ ಆಗಿರುವಾಗ ಸ್ಥಳೀಯ ಅಧಿಕಾರಿಗಳು ತನಿಖೆ ಹೇಗೆ ಮಾಡಿಯಾರು? ಎಂದು ಪ್ರಶ್ನಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...