ಬೆಂಗಳೂರು: ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗದಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿರುವ ಕ್ರಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಅವರ ನಿರ್ಧಾರವನ್ನು ಸಮರ್ಥಿಸಿಕೊಂಡು ಸಿಎಂ ಸಿದ್ದರಾಮಯ್ಯ ನೀಡಿರುವ ಪ್ರತಿಕ್ರಿಯೆಗೆ ಕಿಡಿಕಾರಿರುವ ಸಚಿವ ಪ್ರಹ್ಲಾದ್ ಜೋಶಿ, ಅಲ್ಪಸಂಖ್ಯಾತರ ವೋಟ್ ತಪ್ಪುವ ಆತಂಕದಿಂದ ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆಯ ಆಹ್ವಾನ ತಿರಸ್ಕರಿಸಿದ್ದಾರೆ ಎಂದಿದ್ದಾರೆ.
ಈ ಹಿಂದೆಯೂ ಸೋಮನಾಥ ದೇವಸ್ಥಾನ ಉದ್ಘಾಟನೆಗೆ ಹೋಗಿಲ್ಲ. ಕಾಂಗ್ರೆಸ್ ನ ತುಷ್ಟೀಕರಣದ ಪರಾಕಾಷ್ಠೆಯನ್ನು ಜನರು ಗಮನಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯನವರೇ ಅಯೋಧ್ಯೆಯಲ್ಲಿ ರಾಜಕೀಯ ಮಾಡಲು ಅಲ್ಲಿ ನಡೆಯುತ್ತಿರುವುದು 140 ಕೋಟಿ ಭಾರತೀಯರ ಅಸ್ಮಿತೆ. ಪ್ರಭು ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಹೊರತು ವಿದೇಶಿ ವ್ಯಕ್ತಿಯೊಬ್ಬ ಸ್ಥಾಪಿಸಿದ ಕಾಂಗೆಸ್ ಪಕ್ಷದ ಚುನಾವಣಾ ರ್ಯಾಲಿಯಲ್ಲ ಎಂದು ತಿರುಗೇಟು ನೀಡಿದ್ದಾರೆ.