BIG NEWS: ವಕ್ಫ್ ರಾಷ್ಟ್ರೀಕರಣ ಮಾಡುವ ಪ್ರಶ್ನೆಯೇ ಇಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ವಕ್ಫ್ ರಾಷ್ಟ್ರ‍ೀಕರಣ ಮಾದುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಕ್ಫ್ ರಾಷ್ಟ್ರೀಯಕರಣ ಮಾಡಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ವಕ್ಫ್ ಗೆ ನೀಡಿರುವ ಅಪರಿಮಿತ ಅಧಿಕಾರವನ್ನು ರದ್ದು ಮಾಡುವ ಕೆಲಸ ಮಾಡಲಿ ಎಂದು ಹೇಳಿದರು.

ರಾಜ್ಯ ಸರ್ಕಾರ ವಕ್ಫ್ ಮಂಡಳಿಗೆ ನೀಡಿರುವ ಅಧಿಕಾರ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ವಕ್ಫ್ ಬೋರ್ಡ್ ನಿಂದ ರೈತರ ಭೂಮಿ ಕಬಳಿಕೆ ಆರೋಪ ಕೇಳಿಬಂದಿರುವ ಬೆನ್ನಲ್ಲೇ ಬಿಜೆಪಿ ಶಾಸಕ ಯತ್ನಾಳ್, ವಕ್ಫ್ ಆಸ್ತಿ ರಾಷ್ಟ್ರೀಕರಣಗೊಳಿಸಬೇಕು. ಇದರಿಂದ ಪಾರದರ್ಶಕವಾಗಿ ವಕ್ಫ್ ಭೂಮಿ ಹಾಗೂ ರೈತರ ಭೂಮಿ ಬಗ್ಗೆ ಸ್ಪಷ್ಟತೆಸಿಗುತ್ತದೆ ಎಂದು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದರು. ಇದೇ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಕ್ಫ್ ರಾಷ್ಟ್ರೀಕರಣ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read