
ಭೋಪಾಲ್: ಮಂಗಳವಾರ ರಸ್ತೆ ಅಪಘಾತದ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್ ಪಾರಾಗಿದ್ದಾರೆ. ಅವರ ಬೆಂಗಾವಲು ವಾಹನ ಬೈಕ್ ಗೆ ಡಿಕ್ಕಿ ಹೊಡೆದು ಒಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ.
ಬೈಕ್ ಚಲಾಯಿಸುತ್ತಿದ್ದ 35 ವರ್ಷದ ಶಿಕ್ಷಕ ಪ್ರಾಣ ಕಳೆದುಕೊಂಡಿದ್ದು, ಇತರ ಮೂವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಪ್ರಹ್ಲಾದ್ ಪಟೇಲ್ ಅವರ ಬೆಂಗಾವಲು ಪಡೆ ಚಿಂದ್ವಾರದಿಂದ ನರಸಿಂಗ್‌ಪುರಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ತಪ್ಪು ದಿಕ್ಕಿನಲ್ಲಿ ಸಾಗುತ್ತಿದ್ದ ಮೋಟಾರ್ ಸೈಕಲ್ ಸವಾರನನ್ನು ರಕ್ಷಿಸಲು ಯತ್ನಿಸಿದಾಗ ಈ ಘಟನೆ ಸಂಭವಿಸಿದೆ. ಪ್ರಹ್ಲಾದ್ ಪಟೇಲ್ ಅವರು ಕೇಂದ್ರ ಸಚಿವರಷ್ಟೇ ಅಲ್ಲ, ಚುನಾವಣೆಯಲ್ಲಿ ಅಭ್ಯರ್ಥಿಯೂ ಆಗಿದ್ದು, ಚಿಂದ್ವಾರ ಮತ್ತು ನರಸಿಂಗ್‌ಪುರ ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ.