alex Certify ಪ್ರಜ್ವಲ್ ಪ್ರಕರಣ: ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಆರ್ಥಿಕ ನೆರವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಜ್ವಲ್ ಪ್ರಕರಣ: ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಆರ್ಥಿಕ ನೆರವು

ಬೆಳಗಾವಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 75 ವರ್ಷಗಳಲ್ಲಿ ಎಂದು ಕಂಡರಿಯದ ಪ್ರಕರಣ ಇದಾಗಿದೆ. ಇಂತಹ ಕೃತ್ಯಗಳ ಬಗ್ಗೆ ಮಾಹಿತಿ ಇದ್ದರೂ ಬಿಜೆಪಿ ನಾಯಕರು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜ್ವಲ್ ರಾಜತಾಂತ್ರಿಕ ಪಾಸ್ಪೋರ್ಟ್ ಅನ್ನು ಏಕೆ ರದ್ದುಗೊಳಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ನೂರಾರು ಸಂಖ್ಯೆಯಲ್ಲಿರುವ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್ಥಿಕ ನೆರವು ಘೋಷಿಸಿದ್ದಾರೆ. ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...