ಬೆಂಗಳೂರು : ಪ್ರಜ್ವಲ್ ರೇವಣ್ಣ ಅರೆಸ್ಟ್ ಆಗಿದ್ದಾರೆ, ಸಂತ್ರಸ್ತೆಯರು ಬಂದು ದೂರು ಕೊಡಿ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಕೊನೆಗೂ ಎಸ್ ಐ ಟಿ ಅಧಿಕಾರಿಗಳ ಕೈಗೆ ಸಿಕ್ಕಿ ಹಾಕಿಕೊಂಡಿದ್ದು, ವಿಚಾರಣೆ ನಡೆಯುತ್ತಿದೆ. ಪ್ರಜ್ವಲ್ ರೇವಣ್ಣ ರನ್ನು ನಿನ್ನೆ ಬಂಧಿಸಲಾಗಿದೆ. ಸಂತ್ರಸ್ತೆಯರು ಬಂದು ದೂರು ಕೊಡಬಹುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಅತ್ಯಾಚಾರ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಚ್ ನಗರದಿಂದ ಗುರುವಾರ ತಡರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ್ದು, ಅವರನ್ನು ಬಂಧಿಸಲಾಗಿದೆ. ಜನಪ್ರತಿನಿಧಿಗಳ ಕೋರ್ಟ್ ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿಯೇ ಅವರನ್ನು ಬಂಧಿಸಲಾಗಿದೆ.