ಹಾಸನ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯ 14 ದಿನ ಪ್ರಜ್ವಲ್ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದ್ದು, ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿದೆ.
ಎಸ್ಐಟಿ ಅಧಿಕಾರಿಗಳ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಬಸವನಗುಡಿಯಲ್ಲಿ ಸ್ಥಳ ಮಹಜರು ಬಳಿಕ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಸೋಮವಾರ ಹಾಜರುಪಡಿಸಿದ್ದರು.
ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಮುಂದಿನ 14 ದಿನಗಳ ವರೆಗೆ (ಜೂನ್ 24ರವರೆಗೆ) ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.