ಬೆಂಗಳೂರು: ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದ ಎರಡನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್, ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣಗೆ ಎರಡನೇ ಪ್ರಕರಣದಲ್ಲಿ ಹಿನ್ನಡೆಯಾಗಿದೆ. ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೋ ಚಿತ್ರೀಕರಣ ಪ್ರಕರಣ ಸಂಬಂಧ ಎಸ್ ಐಟಿಯಿಂದ ಬಂಧಿಸಲ್ಪಟ್ಟಿದ್ದ ಪ್ರಜ್ವಲ್ ರೇವಣ್ಣ ಈಗಗಾಲೇ ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಮತ್ತೊಂದು ಕೇಸ್ ಗೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.