ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಏರ್ ಪೋರ್ಟ್ ನಲ್ಲಿಯೇ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಇಂದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಿದ್ದಾರೆ.
ಎಸ್ಐಟಿ ಕಚೇರಿಯಲ್ಲಿರುವ ಪ್ರಜ್ವಲ್ ನನ್ನು ಪ್ರಾಥಮಿಕವಾಗಿ ವಿಚಾರಣೆ ನಡೆಸಿ, ಇಂದು ಎಸ್ ಐಟಿ ಅಧಿಕಾರಿಗಳು ವೈದ್ಯಕೀಯ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಿದ್ದಾರೆ. ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಜ್ವಲ್ ಮೆಡಿಕಲ್ ಟೆಸ್ಟ್ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಬೌರಿಂಗ್ ಆಸ್ಪತ್ರೆ ಬಳಿ ಭದ್ರತೆಗಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಇಬ್ಬರು ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್, 1 ಕೆ ಎಸ್ ಆರ್ ಪಿ ತುಕಡಿ ನಿಯೋಜಿಸಲಾಗಿದೆ. ಮೆಡಿಕಲ್ ಟೆಸ್ಟ್ ಬಳಿಕ ಪ್ರಜ್ವಲ್ ನನ್ನು ಕೋರ್ಟ್ ಗೆ ಹಾಜರುಪಡಿಸುವ ಸಾಧ್ಯತೆ ಇದೆ.