ಬೆಂಗಳೂರು: ಅತ್ಯಾಚಾರ ಆರೋಪದಲ್ಲಿ ಬಂಧನಕ್ಕೆ ಒಳಗಾದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ ಅರ್ಜಿಗಳ ಮೇಲಿನ ಆದೇಶವನ್ನು ಅ. 21 ರಂದು ಹೈಕೋರ್ಟ್ ಪ್ರಕಟಿಸಲಿದೆ.
ಒಂದು ಪ್ರಕರಣದಲ್ಲಿ ಜಾಮೀನು, ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ತಿರಿಸಲಾಗಿದ್ದ ಆದೇಶವನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಸೋಮವಾರ ಪ್ರಕಟಿಸಲಿದೆ.
ನಾಲ್ಕು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಜಾಮೀನು ಕೋರಲಾಗಿದೆ. ಸಿಐಡಿ ಸೈಬರ್ ಸೆಲ್ ನಲ್ಲಿ ದಾಖಲಾಗಿದ್ದ ಮತ್ತೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದಾರೆ.