ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಸದ್ಯಕ್ಕೆ ಭಾರತಕ್ಕೆ ಮರಳುವ ಲಕ್ಷಣಗಳು ಕಾಣುತ್ತಿಲ್ಲ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ನನ್ನು ಕಾನೂನಾತ್ಮಕವಾಗಿ ಕಟ್ಟಿಹಾಕಲು ಎಸ್ಐಟಿ ಹೊಸ ಪ್ಲಾನ್ ಮಾಡಿದೆ.
ಪ್ರಜ್ವಲ್ ರೇವಣ್ಣನನ್ನು ಆರ್ಥಿಕವಾಗಿ ಕಟ್ಟಿಹಾಕುವ ನಿಟ್ಟಿನಲ್ಲಿ ಎಸ್ಐಟಿ ಸಿದ್ಧತೆ ನಡೆಸಿದೆ. ಕೋರ್ಟ್ ಅನುಮತಿ ಪಡೆದು ಪ್ರಜ್ವಲ್ ಬ್ಯಾಂಕ್ ಖಾತೆಯನ್ನು ಫ್ರೀಜ್ ಮಾಡಲು ಎಸ್ಐಟಿ ತಯಾರಿ ನಡೆಸಿದೆ. ಹೀಗಾಗಿ ಪ್ರಜ್ವಲ್ ಬ್ಯಾಂಕ್ ಖಾತೆಗಳ ಮಾಹಿತಿಯನ್ನು ಎಸ್ಐಟಿ ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ.
ಈ ನಡುವೆ ಪ್ರಜ್ವಲ್ ರೇವಣ್ಣ ಜರ್ಮನಿಯಿಂದ ಲಂಡನ್ ಗೆ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂಗ್ಲೆಂಡ್ ನಲ್ಲಿ ಭಾರತ ಮೂಲದ ಉದ್ಯಮಿಯೊಬ್ಬರ ಸಹಾಯದಿಂದ ಪ್ರಜ್ವಲ್ ರೇವಣ್ಣ ಹಾಗೂ ಅವರ ಗೆಳೆಯ ರೈಲಿನ ಮೂಲಕವಾಗಿ ಲಂಡನ್ ಗೆ ತೆರಳಿದ್ದಾರೆ ಎನ್ನಲಾಗುತ್ತಿದೆ.
ಪ್ರಜ್ವಲ್ ರೇವಣ್ಣ ಕಳೆದ 15 ದಿನಗಳಿಂದ ಕುಟುಂಬದ ಜೊತೆಯೂ ಯಾವುದೇ ಸಂಪರ್ಕದಲ್ಲಿ ಇಲ್ಲ. ಈಗಾಗಲೇ ಭಾರತಕ್ಕೆ ಬರಬೇಕಿದ್ದ ಪ್ರಜ್ವಲ್ ಎರಡು ಬಾರಿ ಟಿಕೆಟ್ ಕ್ಯಾನ್ಸಲ್ ಮಾಡಿದ್ದಾರೆ. ಮೇ 3 ಹಾಗೂ ಮೇ 15ರಂದು ಭಾರತಕ್ಕೆ ಬರಲು ವಿಮಾನದ ಟಿಕೆಟ್ ಬುಕ್ ಮಾಡಿ ಕ್ಯಾನ್ಸಲ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.