BIG BREAKING: ಫ್ಲೈಟ್ ಟಿಕೆಟ್ ಮತ್ತೆ ಕ್ಯಾನ್ಸಲ್ ಮಾಡಿದ ಪ್ರಜ್ವಲ್ ರೇವಣ್ಣ

ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ, ಚುನಾವಣೆ ಮುಗಿದ ದಿನವೇ ವಿದೇಶಕ್ಕೆ ತೆರಳಿದ್ದು ಅವರ ಬಂಧನಕ್ಕಾಗಿ ಎಸ್ಐಟಿ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಿತ್ತು.

ಜರ್ಮನಿಗೆ ತೆರಳುವಾಗಲೇ ಪ್ರಜ್ವಲ್ ರೇವಣ್ಣ ಅವರು ರಿಟರ್ನ್ ಟಿಕೆಟ್ ಕೂಡ ಬುಕ್ ಮಾಡಿದ್ದು, ಯಾವಾಗ ತಮ್ಮ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಯಿತೋ ಆಗ ಟಿಕೆಟ್ ಕ್ಯಾನ್ಸಲ್ ಮಾಡಿದ್ದರು. ಆದರೆ ಮತ್ತೊಮ್ಮೆ ಪ್ರಜ್ವಲ್ ರೇವಣ್ಣ ಟಿಕೆಟ್ ಬುಕ್ ಮಾಡಿದ್ದು, ಆಗಲಾದರೂ ಭಾರತಕ್ಕೆ ಬರಬಹುದು ಎಂಬ ನಿರೀಕ್ಷೆ ಇತ್ತು, ಆದರೆ ಆಗ ಕೂಡ ಪ್ರಜ್ವಲ್ ರೇವಣ್ಣ ಟಿಕೆಟ್ ಕ್ಯಾನ್ಸಲ್ ಮಾಡಿದ್ದರು.

ಇದರ ಮಧ್ಯೆ ಕಿಡ್ನ್ಯಾಪ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ತಂದೆ ಎಚ್ ಡಿ ರೇವಣ್ಣ ಬಂಧನವಾಗಿದ್ದು, ಮಂಗಳವಾರದಂದು ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಈ ಬೆಳವಣಿಗೆ ನಡೆದ ನಂತರ ಪ್ರಜ್ವಲ್ ರೇವಣ್ಣ ಮ್ಯೂನಿಚ್ ನಿಂದ ಇಂದು ಬೆಂಗಳೂರಿಗೆ ಬರಲು ಟಿಕೆಟ್ ಬುಕ್ ಮಾಡಿದ್ದು, ಆದರೆ ಕೊನೆ ಕ್ಷಣದಲ್ಲಿ ಮತ್ತೆ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ. ಹೀಗಾಗಿ ಅವರು ಯಾವಾಗ ಬರುತ್ತಾರೆ ಎಂಬುದು ಇನ್ನೂ ಕೂಡ ಖಚಿತವಾಗಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read