ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಿಡುಗಡೆ ಪ್ರಕರಣ, ಹೆಚ್.ಡಿ.ರೇವಣ್ಣ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಕಾರ್ಯಕರ್ತರು ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧ ಪೆನ್ ಡ್ರೈವ್ ಬಿಡುಗಡೆ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ಕೈವಾಡವಿದೆ ಎಂದು ಬಿಜೆಪಿ ಮುಖಂಡ ದೇವರಾಜೇಗೌಡ ಆರೋಪಿಸಿರುವ ಬೆನ್ನಲ್ಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡ್ಯ, ಕೋಲಾರ, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ಟೈರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿ.ಕೆ.ಶಿವಕುಮಾರ್, ಮಾಜಿ ಸಂಸದ ಎಲ್ .ಆರ್ ಶಿವರಾಮೇ ಗೌಡ ವಿರುದ್ಧ ಘೋಷಣೆ ಕೂಗಿ ಕಿಡಿಕಾರಿದ್ದಾರೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಹಲವು ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.