ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರು ಚಾಲಕ ಕಾರ್ತಿಕ್ ಗೌಡ ಹಾಗೂ ಇತರರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು, ಬಂಧನ ಭೀತಿ ಎದುರಾಗಿದೆ.
ಹಾಸನದ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ್ದು, ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಗೌಡ, ಪುಟ್ಟ ಅಲಿಯಾಸ್ ಪುಟ್ಟರಾಜ್, ನವೀನ್ ಗೌಡ, ಚೇತನ್ ಗೆ ಬಂಧನ ಭೀತಿ ಶುರುವಾಗಿದೆ.
ಹಾಸನ ಪೊಲೀಸರು ನಾಲ್ವರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದು, ಹುಡುಕಾಟ ನಡೆಸಿದ್ದಾರೆ.