
ಬೆಂಗಳೂರು: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಓರ್ವ ಆರೋಪಿಗೆ ಎಸ್ಐಟಿ ಕಸ್ಟಡಿಗೆ ನೀಡಲಾಗಿದೆ.
ಕಿಡ್ನ್ಯಾಪ್ ಪ್ರಕರಣದಲ್ಲಿ ಆರೋಪಿಗಳಾದ ಮಧು, ಮನು ಹಾಗೂ ಸುಜಯ್ ಎಂಬ ಮೂವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದೇ ವೇಳೆ ಪ್ರಕರಣದ ಇನ್ನೋರ್ವ ಪ್ರಮುಖ ಆರೋಪಿ ಸತೀಶ್ ಬಾಬುಗೆ ನಾಲ್ಕು ದಿನಗಳ ಕಾಲ ಎಸ್ಐಟಿ ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.
ಸತೀಶ್ ಬಾಬು ಹೆಚ್ಚಿನ ವಿಚಾರಣೆಗಾಗಿ ಎಸ್ಐಟಿ ಅಧಿಕಾರಿಗಳು ಕಸ್ಟಡಿಗೆ ಕೇಳಿದ್ದರು. ಈ ನಿಟ್ಟಿನಲ್ಲಿ ನಾಲ್ಕು ದಿನ ಕಸ್ಟಡಿಗೆ ನೀಡಲಾಗಿದೆ.