ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಕೈವಾಡಿವೆ ಎಂದು ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಗಂಭೀರ ಆರೋಪ ಮಾಡಿದ್ದಾರೆ. ಪೆನ್ ಡ್ರೈವ್ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಪಾತ್ರವಿದೆ ಎಂದು ಆರೋಪಿಸಿರುವ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನ ವಿವಿಧೆಡೆ ಡಿಸಿಎಂ ವಿರುದ್ಧ ಪೋಸ್ಟರ್ ಅಂಟಿಸಲಾಗಿದೆ.
ಬೆಂಗಳೂರು ನಗರದ ವಿವಿಧ ಸ್ಥಳಗಳಲ್ಲಿ ರಾತ್ರಿ ಬೆಳಗಾಗುವಷ್ಟರಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಪೋಸ್ಟರ್ ಗಳು ಪ್ರತ್ಯಕ್ಷವಾಗಿವೆ. ಲುಲು ಮಾಲ್, ಕೆಪಿಸಿಸಿ ಕಚೇರಿ ಸೇರಿದಂತೆ ಬೆಂಗಳೂರಿನ ವಿವಿಧೆಡೆಗಳಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಪೋಸ್ಟರ್ ಗಳನ್ನು ಅಂಟಿಸಲಾಗಿದೆ.
ಒಟ್ಟಾರೆ ಪ್ರಜ್ವಲ್ ರೇವನ್ಣ ಅಶ್ಲೀಲ ವಿಡಿಯೋ ಪ್ರಕರಣ ವೈರಲ್ ವಿಚಾರ ರಾಜಕೀಯ ತಿರುವು ಪಡೆದುಕೊಂಡಿದ್ದು, ಆದಳಿತ ಹಾಗೂ ವಿಪಕ್ಷಗಳ ಕೆಸರೆರಚಾಟಕ್ಕೆ ಕಾರಣವಾಗಿದೆ.