ಹಾಸನ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ವಿಡಿಯೋ ವೈರಲ್ ಮಾಡಿರುವ ಪ್ರಕರಣದಲ್ಲಿ ಬಿಜೆಪಿ ನಾಯಕ ಪ್ರೀತಂ ಗೌಡ ಆಪ್ತರನ್ನು ಬಂಧಿಸಲಾಗಿದೆ. ಈ ನಡುವೆ ಇನ್ನೊಂದು ವಿಚಾರ ಬೆಳಕಿಗೆ ಬಂದಿದೆ.
ಪ್ರೀತಂ ಗೌಡ ಆಪ್ತ ಶರತ್ ಅಲಿಯಾಸ್ ಕ್ವಾಲಿಟಿ ಬಾರ್ ಶರತ್ ವಿರುದ್ಧ ಪ್ರಕರಣ ಬೆಳಕಿಗೆ ಬರುವ ಮುನ್ನಬೇ ಅಂದರೆ ಏಪ್ರಿಲ್ 21ರಂದು ಜೆಡಿಎಸ್ ನಾಯಕರು ದೂರು ನೀಡಿದ್ದರು.
ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಹಾಸನದಲ್ಲಿ ಹರಿದಾಡುತ್ತಿದ್ದಂತೆಯೇ ಏಪ್ರಿಲ್ 23ರಂದು ಹಾಸನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಸರ್ಕಾರ ಎಸ್ ಐಟಿ ರಚಿಸಿ ತನಿಖೆಯನ್ನು ಎಸ್ ಐಟಿಗೆ ವರ್ಗಾಯಿಸಿತು. ಇದೀಗ ವಿಡಿಯೋ ವೈರಲ್ ಕೇಸ್ ನಲ್ಲಿ ಬಿಜೆಪಿ ಮುಖಂಡ ಪ್ರೀತಂ ಗೌಡ ಅಪ್ತರೇ ಅರೆಸ್ಟ್ ಆಗಿರುವುದು ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ.