ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ವಿದೇಶದಲ್ಲಿ ಪರಾರಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧನ ವಾರಂಟ್ ಜಾರಿಗೊಳಿಸಿದೆ.
ವಾರೆಂಟ್ ಜಾರಿ ಹಿನ್ನೆಲೆಯಲ್ಲಿ ಸ್ವದೇಶಕ್ಕೆ ಮರಳಿದ ಕೂಡಲೇ ಪ್ರಜ್ವಲ್ ಅವರನ್ನು ಬಂಧಿಸಲಾಗುವುದು. ಪ್ರಜ್ವಲ್ ಬಳಿ ಇರುವ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಎಸ್ಐಟಿಯಿಂದ ಪತ್ರ ಬರೆಯಲಾಗುವುದು ಎಂದು ಹೇಳಲಾಗಿದೆ.
ತಮ್ಮ ಮನೆಯ ಕೆಲಸ ಮಾಡುವ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪ್ರಜ್ವಲ್ ರೇವಣ್ಣ ಮತ್ತು ಅವರ ತಂದೆ ಹೆಚ್.ಡಿ. ರೇವಣ್ಣ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.