ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಶಾಸಕ ಹೆಚ್.ಡಿ.ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಹೆಸರು ಬಳಸುವಂತಿಲ್ಲ ಎಂದು ಕೋರ್ಟ್ ತಡೆಯಾಜ್ಞೆ ನೀಡಿದೆ.
ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವೇಗೌಡರ ಹೆಸರನ್ನು ಹಾಗೂ ಹೆಚ್.ಡಿ.ಕುಮಾರಸ್ವಾಮಿ ಹೆಸರನ್ನು ಬಳಕೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ತಮ್ಮ ಹೆಸರನ್ನು ಸುದ್ದಿ ಪ್ರಸಾರ ಮಾಡುವಾಗ ಬಳಸದಂತೆ ನಿರ್ದೇಶಿಸುವಂತೆ ಹೆಚ್.ಡಿ.ಕೆ ಸಿಟಿ ಸಿವಿಲ್ ಕೋರ್ಟ್ ಮೊರೆ ಹೋಗಿದ್ದರು.
ಈ ಹಿನ್ನೆಲೆಯಲ್ಲಿ ಬೆಂಗಳೂರಿನ 34ನೇ ಸಿಟಿ ಸಿವಿಲ್ ಕೋರ್ಟ್ ಮನವಿಯನ್ನು ಪರಿಗಣಿಸಿದ್ದು, ಸಾಕ್ಷಿ ಇಲ್ಲದೇ ವಿಡಿಯೋ ಕೇಸ್ ಗೆ ಸಂಬಂಧಿಸಿದಂತೆ ಸುದ್ದಿ ಪ್ರಸಾರ ಮಾಡುವಂತಿಲ್ಲ. ಹೆಚ್.ಡಿ.ಕೆ ಹಾಗೂ ದೇವೇಗೌಡರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡದಂತೆ ಆದೇಶ ನೀಡಿದೆ.