ಬೆಂಗಳೂರು : ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹರಾಗಿದ್ದು , ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.ಈ ಬಗ್ಗೆ ಹೆಚ್.ಡಿ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ ಏನೇ ಇರಲಿ ನಾವು ಕಾನೂನಿಗೆ ತಲೆ ಬಾಗಬೇಕು, ನಾವು ತಲೆ ಬಾಗುತ್ತೇವೆ ಎಂದರು., ಇನ್ನೂ ನಮಗೆ ತೀರ್ಪಿನ ಆದೇಶದ ಪ್ರತಿ ಸಿಕ್ಕಿಲ್ಲ. ಯಾರು, ಏಕೆ ಮಾಡಿದರು ಅಂತಾ ಗೊತ್ತಿಲ್ಲ. ಮೇಲ್ಮನವಿ ಸಲ್ಲಿಸುವ ಬಗ್ಗೆ ಪ್ರಜ್ವಲ್ ರೇವಣ್ಣ ನಿರ್ಧರಿಸುತ್ತಾರೆ, ಇದಕ್ಕೆ ಅವರ ಲಾಯರ್ ಇದ್ದಾರೆ’ ಎಂದರು.
ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಎದುರಾಗಿದ್ದು, ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.ಈ ಬಗ್ಗೆ ಮಾತನಾಡಿದ ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ಪ್ರಜ್ವಲ್ ಜೊತೆ ರೇವಣ್ಣ, ಎ ಮಂಜು ಕೂಡ ಅನರ್ಹರಾಗುತ್ತಾರೆ ಎಂದು ಹೇಳಿದ್ದಾರೆ. ಯಾವುದೇ ಚುನಾವಣೆಗೆ ಸ್ಪರ್ಧಿಸುವಾಗ ಆಸ್ತಿ, ಬ್ಯಾಂಕ್ ವಿವರಗಳ ಬಗ್ಗೆ ಸರಿಯಾದ ಮಾಹಿತಿ ನೀಡಬೇಕು. ಆದರೆ ಪ್ರಜ್ವಲ್ ರೇವಣ್ಣ ಸರಿಯಾಗಿ ಮಾಹಿತಿ ನೀಡದ ಕಾರಣ ಅವರನ್ನು ಹೈಕೋರ್ಟ್ ಅನರ್ಹ ಮಾಡಿದೆ ಎಂದಿದ್ದಾರೆ.