alex Certify BREAKING NEWS: ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ

ಬೆಂಗಳೂರು: ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್. ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಪ್ರಜ್ವಲ್ ರೇವಣ್ಣ ಆಯ್ಕೆ ಪ್ರಶ್ನಿಸಿ ಎ.ಮಂಜು, ದೇವರಾಜೇಗೌಡ ಅವರು ಚುನವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧುಗೊಳಿಸಿ ಆದೇಶ ಹೊರಡಿಸಿದೆ.

ಸಂಸದ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...