ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ, ಅಶ್ಲೀಲ ವಿಡಿಯೋ ಚಿತ್ರೀಕರಣ, ಲೈಂಗಿಕ ದೌರ್ಜನ್ಯ ಸೇರಿದಂತೆ ಮೂರು ಗಂಭೀರ ಪ್ರಕರಣಗಳು ದಾಖಲಾಗಿದ್ದು. ಈಗಾಗಲೇ ನ್ಯಾಯಾಂಗ ಬಂಧನದಿಂದ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇಂದು ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.
ಈ ವೇಳೆ ನ್ಯಾಯಾಧೀಶ ಕೆ.ಎನ್.ಶಿವಕುಮಾರ್, ಪ್ರಜ್ವಲ್ ರೇವಣ್ಣಗೆ ಜುಲೈ 8ರವರೆಗೆ ಅಂದರೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.