
ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲುಪಾಲಾಗಿದ್ದಾರೆ.
ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಎಸ್ ಐಟಿ ಅಧಿಕಾರಿಗಳು ಇಂದು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಈ ವೇಳೆ ಕೋರ್ಟ್ ಪ್ರಜ್ವಲ್ ರೇವಣ್ಣಗೆ ಜೂನ್ 24ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಜೈಲುಪಾಲಾಗಿದ್ದಾರೆ.