alex Certify BREAKING: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತು ಮಾಡಿ: ದೇವೇಗೌಡರಿಗೆ ಶಾಸಕ ಶರಣಗೌಡ ಪತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತು ಮಾಡಿ: ದೇವೇಗೌಡರಿಗೆ ಶಾಸಕ ಶರಣಗೌಡ ಪತ್ರ

ಬೆಂಗಳೂರು: ಪಕ್ಷಕ್ಕೆ ಆಗುತ್ತಿರುವ ಮುಜುಗರ ತಪ್ಪಿಸಲು ಪ್ರಜ್ವಲ್ ರೇವಣ್ಣ ಅವರನ್ನು ಅಮಾನತು ಮಾಡುವಂತೆ ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಶಾಸಕ ಶರಣಗೌಡ ಕಂದಕೂರ ಪತ್ರ ಬರೆದಿದ್ದಾರೆ.

ಕೆಲವು ದಿನಗಳಿಂದ ಹರಿದಾಡುತ್ತಿರುವ ವಿಡಿಯೋದಿಂದ ಮುಜುಗರ ಉಂಟಾಗಿದೆ. ಈ ವಿಡಿಯೋಗಳಲ್ಲಿ ಪ್ರಜ್ವಲ್ ರೇವಣ್ಣ ಕಾಣಿಸಿಕೊಂಡಿದ್ದಾರೆ. ಮೇಲ್ನೋಟಕ್ಕೆ ಪ್ರಜ್ವಲ್ ರೇವಣ್ಣ ತಪ್ಪಿತಸ್ಥರು ಎನ್ನುವ ಭಾವನೆ ಉಂಟಾಗಿದೆ. ದೇವೇಗೌಡರು, ಕುಮಾರಸ್ವಾಮಿ ಹೆಣ್ಣು ಮಕ್ಕಳಿಗೆ ಗೌರವ ನೀಡುತ್ತಾ ಬಂದಿದ್ದಾರೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಲಾಟರಿ ನಿಷೇಧ ಮಾಡಿದ್ದರು. ಲಾಟರಿ ನಿಷೇಧಿಸುವ ಮೂಲಕ ಹೆಣ್ಣು ಮಕ್ಕಳ ಪುಣ್ಯಕ್ಕೆ ಪಾತ್ರರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಪಕ್ಷದ ಚಿಹ್ನೆಯಲ್ಲಿ ತೆನೆ ಹೊತ್ತ ಮಹಿಳೆಯ ಚಿತ್ರ ಇದೆ. ಈ ಚಿತ್ರ ಹೆಣ್ಣಿನ ಗೌರವವನ್ನು ಪ್ರತಿಪಾದಿಸುತ್ತದೆ. ಇಂತಹ ಪರಂಪರೆ ಹೊಂದಿರುವ ಪಕ್ಷಕ್ಕೆ ಮುಜುಗರ ತಂದಿರುವುದು ಸುಳ್ಳಲ್ಲ. ಹೀಗಾಗಿ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರ ಪ್ರಕರಣದ ತನಿಖೆ ನಡೆಸಲು ಎಸ್ಐಟಿ ರಚಿಸಿದೆ. ಪಕ್ಷ ಕೂಡ ಆಂತರಿಕ ಸಮಿತಿ ರಚನೆ ಮಾಡಿ ಸತ್ಯಾಸತ್ಯತೆ ತಿಳಿಸಬೇಕು. ಈ ಪ್ರಕರಣದಿಂದ ಸದ್ಯಕ್ಕೆ ಜೆಡಿಎಸ್ ಪಕ್ಷಕ್ಕೆ ಮುಜುಗರ ಆಗುತ್ತಿದೆ. ಮುಜುಗರ ತಪ್ಪಿಸಲು ಪ್ರಜ್ವಲ್ ರೇವಣ್ಣ ಅವರನ್ನು ಅಮಾನತು ಮಾಡಬೇಕು ಎಂದು ಶಾಸಕ ಶರಣಗೌಡ ಕಂದಕೂರ ದೇವೇಗೌಡರಿಗೆ ಪತ್ರ ಬರೆದಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...