
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿದಿನ ಹೊಸ ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಇದೀಗ ಜೆಡಿಎಸ್ ಶಾಸಕ ಎ.ಮಂಜು ನವೀನ್ ಗೌಡ ವಿರುದ್ಧ ಎಸ್ಐಟಿಗೆ ದೂರು ನೀಡಿದ್ದಾರೆ.
ಬೆಂಗಳೂರಿನ ಎಸ್ಐಟಿ ಕಚೇರಿಗೆ ಆಗಮಿಸಿದ ಶಾಸಕ ಎ.ಮಂಜು, ನವೀನ್ ಗೌಡ ವಿರುದ್ಧ ದೂರು ನೀಡಿದ್ದಾರೆ. ನವೀನ್ ಗೌಡ ಫೇಸ್ ಬುಕ್ ಖಾತೆಯಲ್ಲಿ ಅರಕಲಗೂಡು ಶಾಸಕ ಎ.ಮಂಜುಗೆ ಪೆನ್ ಡ್ರೈವ್ ನೀಡಿದ್ದೇನೆ. ಏಪ್ರಿಲ್ 21ರಂದು ಅರಕಲಗೂಡು ಮಾರುತಿ ಕಲ್ಯಾಣ ಮಂಟಪದಲ್ಲಿ ಪೆನ್ ಡ್ರೈವ್ ನೀಡಿದ್ದು, ಮಂಜುಗೆ ಪೆನ್ ಡ್ರೈವ್ ಕೊಟ್ಟ ಬಳಿಕವೇ ವೈರಲ್ ಆಗಿದೆ ಎಂದು ಪೋಸ್ಟ್ ಹಾಕಿದ್ದ.
ಈ ಹಿನ್ನೆಲೆಯಲ್ಲಿ ಶಾಸಕ ಎ.ಮಂಜು, ನವೀನ್ ಗೌಡ ವಿರುದ್ಧ ದೂರು ನೀಡಿದ್ದಾರೆ.