
ಹಾಸನ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇದೀಗ ಇದೇ ಪ್ರಕರಣದಲ್ಲಿ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೇವರಾಜೇಗೌಡ ವಿರುದ್ಧ ಅತ್ಯಾಚಾರ ಕೇಸ್ ದಾಖಲಿಸಿದ್ದು, ಐಪಿಸಿ ಸೆಕ್ಷನ್ 376 ಅಡಿ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು, ದೇವರಾಜೇಗೌಡನನ್ನು ವಶಕ್ಕೆ ಪಡೆದಿದ್ದಾರೆ.
ತಡರಾತ್ರಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ದೇವರಾಜೇಗೌಡನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ಬಳಿಕ ಆತನನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.