
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಒತ್ತಾಯಿಸಿ ಮೇ 30ರಂದು ಹಾಸನ ಚಲೋ ಬೃಹತ್ ಹೋರಾಟ ಕೈಗೊಳ್ಳಲಾಗಿದೆ.
ವಿವಿಧ ಜನಪರ ಮತ್ತು ಮಹಿಳಾ ಸಂಘಟನೆಗಳ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, 40ಕ್ಕೂ ಅಧಿಕ ಸಂಘಟನೆಗಳು ಭಾಗಿಯಾಗಲಿವೆ. 10 ಸಾವಿರಕ್ಕೂ ಅಧಿಕ ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.
ಹಾಸನ ಪೆನ್ ಡ್ರೈವ್ ಪ್ರಕರಣದಲ್ಲಿ ಸಂತ್ರಸ್ತರಿಗೆ ನ್ಯಾಯ ಸಿಗುತ್ತಿಲ್ಲ. ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವ ಬದಲು ಸಂತ್ರಸ್ತರನ್ನೇ ಟಾರ್ಗೆಟ್ ಮಾಡಲಾಗುತ್ತಿದೆ. ಸಂತ್ರಸ್ತರನ್ನೇ ಅಪರಾಧಿ ಎನ್ನುವಂತೆ ಬಿಂಬಿಸಲಾಗುತ್ತಿದೆ ಎಂದು ಹೋರಾಟಗಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಜ್ವಲ್ ರೇವಣ್ಣ ಬಂಧನಕ್ಕೆ ಒತ್ತಾಯಿಸಿ ಮೇ 30ರಂದು ಬೃಹತ್ ಹೋರಾಟ ನಡೆಸಿ ಸರ್ಕಾರಕ್ಕೆ ಒತ್ತಡ ಹೇರಲಾಗುವುದು ಎಂದು ಹೇಳಲಾಗಿದೆ.