ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣಗೆ ರೆಡ್ ಕಾರ್ನರ್ ನೋಟೀಸ್ ನೀಡಲು ಎಸ್ ಐಟಿ ಸಿದ್ಧತೆ ನಡೆಸಿದೆ.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿದ್ದು, ಈಗಾಗಲೇ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟೀಸ್ ನೀಡಲಾಗಿದೆ. ಬಂಧನ ಭೀತಿಯಲ್ಲಿರುವ ಪ್ರಜ್ವಲ್ ವಾಪಾಸ್ ಬರುವುದೇ ಅನುಮಾನ ಎನ್ನಲಾಗಿದೆ.
ಸಂಸದ ಪ್ರಜ್ವಲ್ ರೇವಣ್ಣ ಬಳಿ ರಾಜತಾಂತ್ರಿಕ ಪಾಸ್ ಪೋರ್ಟ್ ಇದೆ. ಹಾಗಾಗಿ ಪ್ರಜ್ವಲ್ ರೇವಣ್ಣಗೆ ವೀಸಾ ಅಗತ್ಯವಿಲ್ಲ. ರಾಜತಾಂತ್ರಿಕ ಪಾಸ್ ಪೋರ್ಟ್ ಬಳಸಿ ವಿದೇಶಕ್ಕೆ ಪ್ರಯಾಣಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ರೆಡ್ ಕಾರ್ನರ್ ನೋಟೀಸ್ ಜಾರಿ ಮಾಡಲು ಸಿದ್ಧತೆ ನಡೆಸಲಾಗಿದೆ.
ರೆಡ್ ಕಾರ್ನರ್ ನೋಟೀಸ್ ಬಗ್ಗೆ ಸಿಐಡಿ ಮೂಲಕ ಸಿಬಿಐ ಗೆ ಮನವಿ ಮಡಲಾಗುತ್ತಿದ್ದು, ಸಿಬಿಐ ಇಂತರ್ ಪೋಲ್ ಮೂಲಕ ರೆಡ್ ಕಾರ್ನರ್ ನೋಟೀಸ್ ನೀಡಬೇಕು. ರೆಡ್ ಕಾರ್ನರ್ ನೋಟೀಸ್ ಜಾರಿ ಮಾಡಿದರೆ ಆರೋಪಿ ಯಾವ ದೇಶದಲ್ಲಿರೂ ಬಂಧಿಸಿ ಮಾಹಿತಿ ನೀಡುತ್ತಾರೆ. ಹೀಗಾಗಿ ಪ್ರಜ್ವಲ್ ವಿರುದ್ಧ ರೆಡ್ ಕಾರ್ನರ್ ನೋಟೀಸ್ ಜಾರಿ ಮಾಡುವ ಸಾಧ್ಯತೆ ದಟ್ಟವಾಗಿದೆ.